ಬಂಗಾಳದಲ್ಲಿ ಭಾರಿ ಹಿಂಸಾಚಾರ: ಸ್ವತಃ ಫೀಲ್ಡಿಗಿಳಿದ ರಾಜ್ಯಪಾಲರು, ಬಾಂಬ್ ದಾಳಿ ಸಂತ್ರಸ್ತನ ಭೇಟಿ
ಕೋಲ್ಕತ್ತಾ: ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸ್ವತಃ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶನಿವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.
ರಾಜ್ಯಪಾಲರು ಇಂದು ಉತ್ತರ 24 ಪರಗಣದ ಬರಾಸತ್-1 ಉಪವಿಭಾಗದಲ್ಲಿ ಬಾಂಬ್ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿಯ ನಿವಾಸಕ್ಕೆ ಭೇಟಿ ನೀಡಿ, ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದರು. ನಂತರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿರುವ ಬರಾಸತ್‌ನ ಆಸ್ಪತ್ರೆಗೆ ತೆರಳಿ ವೈದ್ಯರೊಂದಿಗೆ ಮಾತನಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ನಂತರ ರಾಜ್ಯಪಾಲರು ಆ ವ್ಯಕ್ತಿಯನ್ನು ನಗರ ಮೂಲದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಿದರು. ಅವರು ಪರಿಸ್ಥಿತಿಯನ್ನು ಅವಲೋಕಿಸಿದರು ಮತ್ತು ಮತದಾನದ ಬಗ್ಗೆ ವಿಚಾರಿಸಿದರು” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.