Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಬೆಳಗಾವಿ: ಜು 6ರಿಂದ ನಾಪತ್ತೆಯಾಗಿದ್ದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು (Acharya Shri 108 Kamkumarnandi Maharaj) ಇಂದು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ.

ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆಯಾಗಿದೆ. ಸೀರೆ, ಟವೆಲ್ ಸೇರಿ ಇತರೆ ಬಟ್ಟೆಗಳಿಂದ ಸುತ್ತಿ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಕತ್ತರಿಸಿ ಎಸೆಯಲಾಗಿದೆ. ಈವರೆಗೆ ಮೃತದೇಹದ ಒಟ್ಟು ಐದು ಭಾಗಗಳನ್ನು ವೈದ್ಯಕೀಯ ಸಿಬ್ಬಂದಿ ಹೊರತೆಗೆದಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ ಸಿಬ್ಬಂದಿಗಳು ಸತತ ಒಂಬತ್ತು ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಜೈನಮುನಿ ಮೃತದೇಹ ಪತ್ತೆ ಮಾಡಿದ್ದಾರೆ. ಮೃತದೇಹ ಸಿಕ್ಕ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಿ ಬಿಗಿ ಭದ್ರತೆ ನೀಡಿದ್ದಾರೆ.​

ಜೈನಮುನಿ ಗುಣಧರನಂದಿ ಮಾಹಾರಾಜ್ ಸ್ವಾಮೀಜಿ ಕಣ್ಣೀರು
ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಾಹಾರಾಜ್ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು ಕಣ್ಣೀರು ಹಾಕಿದ್ದಾರೆ.

ಶಾಂತಿಪ್ರಿಯ ಸಮಾಜದ ಸ್ವಾಮೀಜಿಯ ಬರ್ಬರ ಹತ್ಯೆ ತೀವ್ರ ನೋವು ತಂದಿದೆ. ಸಿಎಂ ಇದುವರೆಗೂ ಸಂತಾಪ ಸೂಚಿಸದಿರುವುದು ಆಘಾತವಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಸರ್ಕಾರಕ್ಕೆ ನಮ್ಮಂತ ಅಲ್ಪಸಂಖ್ಯಾತರು ಬೇಡವಾಗಿದೆ. ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ಕೊಡಬೇಕು, ಆರೋಗಳಿಗೆ ಶಿಕ್ಷೆ ಆಗಬೇಕು. ಸರ್ಕಾರ ಲಿಖಿತ ಭರವಸೆ ಕೊಡುವವರೆಗೆ ಅನ್ನಾಹಾರ ತ್ಯಾಗ ಮಾಡುತ್ತೇನೆ. ಪ್ರಾಣ ಹೋಗುವವರೆಗೆ ಸಲ್ಲೇಖ‌ನ ಮಾಡುತ್ತೇನೆ ಎಂದು ಸ್ವಾಮೀಜಿ ಪಟ್ಟುಹಿಡಿದಿದ್ದಾರೆ.

No Comments

Leave A Comment