ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ರಾಜ್ಯದಲ್ಲಿ ಮಳೆ ಅವಾಂತರಕ್ಕೆ 21 ಮಂದಿ ಬಲಿ, 47ಕ್ಕೂ ಹೆಚ್ಚು ಜಾನುವಾರು ಸಾವು: ರಾಜ್ಯ ಸರ್ಕಾರ
ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ.
ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ಧವಿದ್ದು, ಹಾನಿಯಾದ ಮನೆಗಳಿಗೆ 1.25 ಲಕ್ಷ ಪರಿಹಾರ ನೀಡುತ್ತೇವೆ ಎಂದು ಹೇಳಿದರು.
ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಜುಲೈ ಕೊನೆ ವಾರದವರೆಗೆ ಕಾದುನೋಡಿ ಮೋಡ ಬಿತ್ತನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಕೇಂದ್ರದ ನಿಯಮಗಳ ಅನ್ವಯ ಮೋಡ ಬಿತ್ತನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.