
ಅಮರನಾಥ ಯಾತ್ರೆ ವೇಳೆ ಭೂಕುಸಿತ: ಅತಂತ್ರದಲ್ಲಿ 83 ಮಂದಿ ಕನ್ನಡಿಗರು, ರಕ್ಷಣೆಗೆ ರಾಜ್ಯ ಸರ್ಕಾರದಿಂದ ತಂಡ ರವಾನೆ
ಗದಗ: ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕದ 83 ಮಂದಿ ಯಾತ್ರಾರ್ಥಿಗಳೆ ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ.
ಈ ಪೈಕಿ 23 ಮಂದಿ ಯಾತ್ರಾರ್ಥಿಗಳು ಗದಗ ಜಿಲ್ಲೆಯವರು ಎಂದು ಹೇಳಲಾಗುತ್ತಿದೆ. ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಸ್ಥಳದಿಂದಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿಡಿಯೋ ಕಳುಹಿಸಿದ್ದು, ರಕ್ಷಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ಥಳದಲ್ಲಿ 1,000 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು, ಈ ಪೈಕಿ 83 ಮಂದಿ ಕರ್ನಾಟಕದವರು ಎಂದು ಹೇಳಲಾಗುತ್ತಿದೆ. ಇವರೆಲ್ಲರೂ ಅಮರನಾಥದ ಪಂಚತಾರ್ನಿ ಮಿಲಿಟರಿ ಬೇಸ್ ಕ್ಯಾಂಪ್‌ನಲ್ಲಿ ಆಶ್ರಯ ಪಡೆದಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಪ್ರಾಧಿಕಾರದ ಆಯುಕ್ತ ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಉತ್ತರಾಖಂಡಕ್ಕೆ ತೆರಳುತ್ತಿದ್ದು, ಪರಿಸ್ಥಿತಿ ಅವಲೋಕನ ನಡೆಸಲಿದೆ ಎಂದು ವರದಿಗಳು ತಿಳಿಸಿವೆ.