Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ದೆಹಲಿ-ಮೀರತ್ ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ: ಶಾಲಾ ಬಸ್-ಕಾರು ನಡುವೆ ಡಿಕ್ಕಿ, 6 ಮಂದಿ ಸಾವು

ನವದೆಹಲಿ: ಗಾಜಿಯಾಬಾದ್​ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6  ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಇಂದು ಮುಂಜಾನೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಶಾಲಾ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಮುಖಾಮುಖಿಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲಾ ಆರು ಮಂದಿ ಕಾರಿನಲ್ಲಿದ್ದು, ಕಾರು ಗುರ್ಗಾಂವ್‌ಗೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.

ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್‌ಜಿ ಪಡೆದು ತಪ್ಪು ದಿಕ್ಕಿನಿಂದ ಬರುತ್ತಿದ್ದನು. ಕಾರು ಮೀರತ್‌ನಿಂದ ಗುರ್ಗಾಂವ್‌ಗೆ ಹೋಗುತ್ತಿತ್ತು. ಚಾಲಕ ದೆಹಲಿಯಿಂದ ದಾರಿ ತಪ್ಪಿದ ದಿಕ್ಕಿನಿಂದ ಬರುತ್ತಿದ್ದರು. ಇದರ ಪರಿಣಾಮದಿಂದ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದವರು ಒಂದೇ ಕುಟುಂಬದ ಸದಸ್ಯರು. ಬಸ್‌ನಲ್ಲಿ ಯಾವುದೇ ವಿದ್ಯಾರ್ಥಿ ಇರಲಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಂತಾಪ ಸೂಚಿಸಿದ್ದಾರೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

No Comments

Leave A Comment