
ಬೆಂಗಳೂರಿನಲ್ಲಿ ಡಬಲ್ ಮರ್ಡರ್ ಕೇಸು: 24 ಗಂಟೆಯೊಳಗೆ ಮೂವರ ಬಂಧನ
ಬೆಂಗಳೂರು: ನಗರದಲ್ಲಿ ಟೆಕ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (MD) ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹತ್ಯೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್ ರೆಡ್ಡಿ ಬಂಧಿತ ಆರೋಪಿಗಳು.
ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಿನ್ನೆ ಸಂಜೆ ಹಾಡುಹಗಲೇ ಜೋಡಿ ಕೊಲೆ ನಡೆದಿತ್ತು. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ವಿನುಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಫಣಿಂದ್ರ ಸುಬ್ರಹ್ಮಣ್ಯ ಅವರನ್ನು ತಲ್ವಾರ್ ನಿಂದ ಕೊಚ್ಚಿ, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು
