ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಶಿಮ್ಲಾ/ಕುಲು: ನಿರಂತರ ಮಳೆಯಿಂದಾಗಿ ಕುಲು ಜಿಲ್ಲೆಯ ಕಸೋಲ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 2,000 ಪ್ರವಾಸಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಬುಧವಾರ ತಿಳಿಸಿದ್ದಾರೆ.
ಲಾಹೌಲ್‌ನಲ್ಲಿ ಸಿಲುಕಿದ್ದ 300ಕ್ಕೂ ಹೆಚ್ಚು ಪ್ರವಾಸಿ ವಾಹನಗಳು ಆಯಾ ಸ್ಥಳಗಳಿಗೆ ತೆರಳಿವೆ ಎಂದು ಹಿಮಾಚಲ ಸಿಎಂ ಹೇಳಿದ್ದಾರೆ.
ಮಂಗಳವಾರ ಸಂಜೆ ಕುಲು-ಮನಾಲಿ ರಸ್ತೆ ತೆರೆಯಲಾಗಿದ್ದು, ಸುಮಾರು 2,200 ವಾಹನಗಳು ಕುಲು ದಾಟಿವೆ.
ಕಳೆದ ಎರಡು ದಿನಗಳಿಂದ ಮನಾಲಿ ಮತ್ತು ಅದರ ಉಪನಗರಗಳಲ್ಲಿ ಹಲವಾರು ಪ್ರದೇಶಗಳಲ್ಲಿ ಮೊಬೈಲ್ ಸಿಗ್ನಲ್ ಇರಲಿಲ್ಲ ಮತ್ತು ಪ್ರವಾಸಿಗರು ತಮ್ಮ ಕುಟುಂಬಗಳನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಕಸೋಲ್‌ನಲ್ಲಿ ಸಿಲುಕಿದ್ದ 2,000 ಕ್ಕೂ ಹೆಚ್ಚು ಪ್ರವಾಸಿಗರನ್ನು ಸದ್ಯಕ್ಕೆ ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ. ಕಸೋಲ್-ಭುಂಟರ್ ರಸ್ತೆಯಲ್ಲಿನ ಡುಂಖಾರಾ ಭೂಕುಸಿತವನ್ನು ತೆರವುಗೊಳಿಸಲು ನಮ್ಮ ತಂಡಗಳು ಅವಿರತವಾಗಿ ಶ್ರಮಿಸುತ್ತಿವೆ ಎಂದು ಅವರು ಹೇಳಿದ್ದಾರೆ.