ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ.
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು, ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಕೂರ್ಮಾರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇಂದು ವರ್ಗಾವಣೆಗೊಂಡಿದ್ದಾರೆ.