ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ : ಇಬ್ಬರ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಮೂಡುಶೆಡ್ಡೆಗೆ ಹೋಗುವ ಮಾರ್ಗದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವ ರೌಡಿಶೀಟರ್ ಸಹಿತ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ರೌಡಿಶೀಟರ್‌ಮೂಡುಶೆಡ್ಡೆಯ ಮೊಹಮ್ಮದ್ ಶಾರೂಕ್(27) ಮತ್ತು ತೋಕೂರಿನ ಜಗದೀಶ್(45) ಬಂಧಿತ ಆರೋಪಿಗಳು ಎಂದು ತಿಳಿಯಲಾಗಿದೆ.
ಇವರಿಂದ 4 ಗ್ರಾಂ ಎಂಡಿಎಂಎ ಮತ್ತು ಮೂರು ಮಾರಕಾಯುಧ ಹಾಗೂ ಒಂದು ಸ್ವಿಫ್ಟ್ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ನಗರದ ಉತ್ತರ ಉಪ-ವಿಭಾಗದ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಕಾವೂರು ಪೊಲೀಸ್ ನಿರೀಕ್ಷಕ ಗುರುರಾಜ್ ಮತ್ತು ಪಿ.ಎಸ್.ಐ ಮಲ್ಲಿಕಾರ್ಜುನ ಬಿರಾದಾರ್, ಸಿಬಂದಿಗಳಾದ ತಾರಾನಾಥ ಪುತ್ರನ್, ಕಿಶೋರ್,ಲತೇಶ್, ಸಂಭಾಜಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.