ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಧರ್ಮಸ್ಥಳ: ಅಕ್ರಮ ದನ ಸಾಗಾಟ – ಬಿಜೆಪಿ ಕಾರ್ಯಕರ್ತರ ಬಂಧನ
ಧರ್ಮಸ್ಥಳ:,ಜು 13. ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿ , ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಧರ್ಮಸ್ಥಳ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಸಕ್ರಿಯ ಬಿಜೆಪಿ ಕಾರ್ಯಕರ್ತರಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳು.
ಧರ್ಮಸ್ದಳ ಠಾಣೆಯ ಎಸ್ ಐ ಅನಿಲ್ ಕುಮಾರ್ ನೇತೃತ್ವದ ತಂಡ ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ಈ ಸಂದರ್ಭದಲ್ಲಿ ರಾತ್ರಿ 8:45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ವಾಹನದಲ್ಲಿ ಆರು ದನಗಳು, ಎರಡು ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.