Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.  ಗೃಹಲಕ್ಷ್ಮೀ’ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಅಗತ್ಯ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ.

ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುವುದು. ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ ಎಂಎಸ್ ಮೂಲಕ ಮಂಜೂರಾತಿ ಸಂದೇಶ ರವಾನೆ ಮಾಡಲಾಗುತ್ತದೆ. ಫಲಾನುಭವಿಯ ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಮಾಡುತ್ತೇವೆ. ಬೇರೆ ಖಾತೆಗೆ ಆರ್ ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗುತ್ತದೆ. ನೋಂದಣಿಗೆ ಯಾವುದೇ ಶುಲ್ಕ, ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿಪಡಿಸಿಲ್ಲ ಎಂದು ಹೇಳಿದರು.

ಗೃಹಲಕ್ಷ್ಮೀ ಯೋಜನೆಯನ್ನು ರಾಷ್ಟ್ರೀಯ ನಾಯಕರಿಂದ ಚಾಲನೆ ನೀಡಲಾಗುವುದು. ರಾಷ್ಟ್ರೀಯ ನಾಯಕರಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ನಾಯಕರು ಒಪ್ಪಿಕೊಂಡರೆ 17ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಉದ್ಘಾಟನೆ ಮಾಡಲಾಗುವುದು. ಸೋನಿಯಾ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ. ರಾಷ್ಟ್ರೀಯ ನಾಯಕರ ನಿರ್ಧಾರ ಇಂದು ಮಧ್ಯಾಹ್ನ ಖಚಿತವಾಗುತ್ತದೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸಮಯ ನೀಡಲಿಲ್ಲ ಅಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜುಲೈ 19ರಂದು ಚಾಲನೆ ನೀಡಲಾಗುವುದು ಎಂದರು.

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರು ಹಣ ಸಿಗಲಿದೆ.

No Comments

Leave A Comment