ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆ

ವಿಜಯನಗರ: ಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ)​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ.

ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿರುವ ಆನಂದ್ ಸಿಂಗ್ ಅವರು, ಜುಲೈ 1ರಿಂದಲೇ ಅನ್ವಯ ಆಗುವಂತೆ  ರಾಜೀನಾಮೆ ನೀಡಿದ್ದಾರೆ.

ಆನಂದ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ, ವಿಜಯನಗರ ಜಿಲ್ಲೆಯಾಗಿ ರಚನೆಯಾದ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆನಂದ್ ಸಿಂಗ್ ತಮ್ಮ ಪುತ್ರ ಸಿದ್ಧಾರ್ಥ್ ಸಿಂಗ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದರು. ಸಿದ್ಧಾರ್ಥ್​​​ ಸೋಲು ಕಂಡಿದ್ದಾರೆ. ಇದರಿಂದ ಆನಂದ್ ಸಿಂಗ್​ಗೆ ತೀವ್ರ ಮುಖಭಂಗವಾದಂತಾಗಿದೆ. ಇದರ ಬೆನ್ನಲ್ಲೇ ಇದೀಗ ಆನಂದ್ ಸಿಂಗ್ ಪ್ರತಿಷ್ಠಿತ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

No Comments

Leave A Comment