ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​....ಮುಂದುವರೆದ ನಕ್ಸಲ್​ ಕೂಂಬಿಂಗ್​​: ಶರಣಾಗತಿಗೆ ಸೂಚನೆ, ಪ್ಯಾಕೇಜ್​ ನೀಡುತ್ತೇವೆ ಎಂದ ಪರಮೇಶ್ವರ್​

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡೇಟಿಗೆ ಮಹಿಳೆ ಸಾವು, 3 ಟ್ರಕ್ ಗಳಿಗೆ ಬೆಂಕಿಗಾಹುತಿ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಗಲಭೆ ಭುಗಿಲೆದ್ದಿದ್ದು, ರಾಜಧಾನಿ ಪೂರ್ವ ಇಂಫಾಲ್​​ನಲ್ಲಿ (Imphal) ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಇಂಫಾಲದ ಸಾವೊಂಬಂಗ್ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಅವರ ಮುಖದ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಕೋರರು ಮಹಿಳೆಯ ಮೇಲೆ ಗುಂಡು ಹಾರಿಸಿದ್ದರ ಜತೆಗೆ, ಘಟನಾ ಸ್ಥಳದಿಂದ ಪಲಾಯನ ಮಾಡುವ ಮೊದಲು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಸಾಚಾರದಿಂದಾಗಿ ಸುದೀರ್ಘ ಅವಧಿಗೆ ಮುಚ್ಚಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಶುಕ್ರವಾರವಷ್ಟೇ ಮರಳಿ ಕಾರ್ಯಾರಂಭ ಮಾಡಿದ್ದವು. ಇದಾದ ನಂತರ ಒಂದು ದಿನದ ಅವಧಿಯಲ್ಲಿ ಪಶ್ಚಿಮ ಇಂಫಾಲ್ ಜಿಲ್ಲೆಯ ಶಾಲೆಯೊಂದರ ಹೊರಗೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದರಿಂದ ಮತ್ತೆ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮೂರು ಸರಕು ಸಾಗಾಣಿಕಾ ಟ್ರಕ್ ಗಳಿಗೆ ಬೆಂಕಿ ಹಚ್ಚಲಾಗಿದೆ.

ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಮೇ ತಿಂಗಳಲ್ಲಿ ಹಿಂಸಾಚಾರ ಆರಂಭಗೊಂಡಿತ್ತು.

No Comments

Leave A Comment