Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಮಹಾರಾಷ್ಟ್ರ: ಥಾಣೆಯಲ್ಲಿ ಜೀಪಿಗೆ ಟ್ರಕ್ ಡಿಕ್ಕಿ, 6 ಮಂದಿ ದುರ್ಮರಣ!

ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆಯಲ್ಲಿ ಇಂದು ಕಂಟೈನರ್ ಟ್ರಕ್ ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಕೆಲವು ವಿದ್ಯಾರ್ಥಿಗಳು ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಪದ್ಘಾದಿಂದ ಖಡವಾಲಿ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ನಂತರ ಜೀಪ್ ಸುಮಾರು 100 ಮೀಟರ್ ಸ್ಕಿಡ್ ಆಗಿ ತಿರುಗಿತು ಎಂದು ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಿವಂಡಿ ತಾಲೂಕಿನ ಪಾದ್ಘಾ ಪ್ರದೇಶದಲ್ಲಿ ಭಾರೀ ಮಳೆಯ ನಡುವೆ ಬೆಳಗ್ಗೆ 6.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪದ್ಘಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮೂವರು ಭಿವಂಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದರು. ಪ್ರಥಮ ಚಿಕಿತ್ಸೆಯ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಮಾಹಿತಿ ಪಡೆದ ಸ್ಥಳೀಯರು ಸ್ಥಳಕ್ಕಾಗಮಿಸಿ ಸಂತ್ರಸ್ತರಿಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರನ್ನು ಚಿನ್ಮಯ್ ಶಿಂಧೆ (15), ರಿಯಾ ಪರದೇಶಿ, ಚೈತಾಲಿ ಪಿಂಪಲ್ (27), ಸಂತೋಷ್ ಅನಂತ್ ಜಾಧವ್ (50), ವಸಂತ್ ಧರಮ್ ಜಾಧವ್ (50) ಮತ್ತು ಪ್ರಜ್ವಲ್ ಫಿರ್ಕೆ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment