ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘INDIA’ ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್(INDIA) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು,
26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮಹಾರಾಷ್ಟ್ರ, ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಸಂವಿಧಾನವನ್ನು ಕೂಡ ಹಾಳು ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಎನ್ಡಿಎ ಸಭೆಯಲ್ಲಿ ಭಾಗವಹಿಸಿದ ಕೆಲವು ಪಕ್ಷಗಳ ಹೆಸರು ಚುಣಾವಣಾ ಆಯೋಗದ ಪಟ್ಟಿಯಲ್ಲೇ ಇಲ್ಲ. ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ. ಅವರ ಜೊತೆಗಿರೋ ಪಕ್ಷಗಳು ತುಕಡೇ ತುಕಡೇ ಗ್ಯಾಂಗ್. ವಿಪಕ್ಷಗಳ ಸಭೆ ಮಾಡೋದನ್ನ ನೋಡಿ ಮೋದಿಗೆ ಭಯವಾಗಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.