Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಉತ್ತರಾಖಂಡ: ನಮಾಮಿ ಗಂಗೆ ಯೋಜನೆ ವೇಳೆ ಭೀಕರ ದುರಂತ; ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು 15 ಮಂದಿ ಸಾವು

ಡೆಹ್ರಾಡೂನ್:‌ ಅಲಕನಂದಾ ನದಿ ತೀರದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಉಂಟಾದ ಅವಘಡದಲ್ಲಿ ಸುಮಾರು 15 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡ ಭೀಕರ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಅನೇಕ ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಮರಣ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಮಾಮಿ ಗಂಗೆ ಯೋಜನೆಯಲ್ಲಿ ತೊಡಗಿದ್ದ ವೇಳೆ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡಿದೆ.  ಈ ವೇಳೆ ಮೂವರು ಪೊಲೀಸರು ಹಾಗೂ ಮೂವರು ಹೋಮ್ ಗಾರ್ಡ್ ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಗಾಯಗೊಂಡಿದ್ದು ಅವರನ್ನು ಚಮೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ. ದುರ್ಘಟನೆಯಲ್ಲಿ ಪಿಪಲ್ಕೋಟ್ ಹೊರಠಾಣಾ ಇನ್‌ಚಾರ್ಜ್ ಕೂಡ ಮೃತಪಟ್ಟಿದ್ದಾರೆ ಎಂದು ತಿಲಿದು ಬಂದಿದೆ.

No Comments

Leave A Comment