ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಮಂಗಳೂರು: ಎರಡು ಅಂಗಡಿಗಳ ಮೇಲೆ ದಾಳಿ, ಮಾದಕ ದ್ರವ್ಯ ಮಿಶ್ರಿತ 100 ಕೆ.ಜಿ ಚಾಕೊಲೇಟ್ ವಶ
ಮಂಗಳೂರು: ನಗರದ ಎರಡು ಅಂಗಡಿಗಳಲ್ಲಿ ಮಾದಕ ದ್ರವ್ಯ ಮಿಶ್ರಿತ 100 ಕಿಲೋಗ್ರಾಂ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ನಡೆಸಿದ ದಾಳಿಯಲ್ಲಿ ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ‘ಬ್ಯಾಂಗ್’ ಚಾಕೊಲೇಟ್‌ಗಳ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತಿತ್ತು.
ಈ ಸಂಬಂಧ ಇಬ್ಬರನ್ನೂ ಬಂಧಿಸಲಾಗಿದ್ದು, ವಶಪಡಿಸಿಕೊಂಡ ಚಾಕೊಲೇಟ್‌ಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.