ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ನನ್ನ ಹೃದಯ ತುಂಬಾ ನೋವು ತುಂಬಿ ಸಿಟ್ಟಿನಿಂದ ಕುದಿಯುತ್ತಿದೆ, ತಪ್ಪಿತಸ್ಥರನ್ನು ಬಿಡುವುದಿಲ್ಲ’: ಮಣಿಪುರ ಮಹಿಳೆಯರ ಬೆತ್ತಲೆ ಪರೇಡ್ ಬಗ್ಗೆ ಪ್ರಧಾನಿ ಮೋದಿ ಆಕ್ರೋಶ

ನವದೆಹಲಿ: ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ.

ಇಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು ಇದಕ್ಕೂ ಮುನ್ನ ಸಂಸತ್ತು ಭವನ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದ್ದು ತಪ್ಪಿತಸ್ಥರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಕಠಿಣ ಶಿಕ್ಷೆಯಾಗಲಿದೆ ಎಂದಿದ್ದಾರೆ.

ಮುಂಗಾರು ಅಧಿವೇಶನಕ್ಕೆ ಸಹಕಾರ ನೀಡಿ: ಮುಂಗಾರು ಅಧಿವೇಶನದುದ್ದಕ್ಕೂ ಎಲ್ಲಾ ಪಕ್ಷಗಳ ಸದಸ್ಯರು ಸದನದಲ್ಲಿ ಫಲಪ್ರದ ಚರ್ಚೆ ನಡೆಸಿ ಕಲಾಪ ಸುಗಮವಾಗಿ ಸಾಗುವಂತೆ ಸಹಕಾರ ನೀಡಿ,ದೇಶದ ಜನರ ಹಿತಾಸಕ್ತಿಗೆ ಪೂರಕವಾದ ಚರ್ಚೆಗಳಲ್ಲಿ ತೊಡಗಿ ಮಸೂದೆಯನ್ನು ಅಂಗೀಕರಿಸಲು ಸಹಕಾರ ನೀಡುವಂತೆ ಇದೇ ಸಂದರ್ಭದಲ್ಲಿ ಸದನ ಸದಸ್ಯರನ್ನು ಪ್ರಧಾನಿ ಮೋದಿ ಕೇಳಿಕೊಂಡರು.

No Comments

Leave A Comment