ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಮಂಗಳೂರು: ಮೂವರು ಕುಖ್ಯಾತ ಡ್ರಗ್ ಪೆಡ್ಲರ್‌ಗಳ ಬಂಧನ
ಮಂಗಳೂರು:ಜು 21.:ನಗರದಾದ್ಯಂತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿರೂರು ಎಂಬಲ್ಲಿ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ರು ಎನ್ನಲಾಗುತ್ತಿದೆ.
ಬಂಧಿತ ಆರೋಪಿ ಪರಂಗಿಪೇಟೆ ಮೂಲದವನಾದ ಪ್ರಸ್ತುತ ಕೃಷ್ಣಾಪುರ ಸುರತ್ಕಲ್ ನಿವಾಸಿ ಮೊಹಮ್ಮದ್ ನಿಯಾಜ್ (28), ತಲಪಾಡಿ ಕೆ.ಸಿ.ರೋಡ್ ನಿವಾಸಿ ನಿಶಾದ್ (31) ಮತ್ತು ಪಡೀಲ್ ಕಣ್ಣೂರು ನಿವಾಸಿ ಮಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅವರಿಂದ ಒಟ್ಟು 180 ಗ್ರಾಂ ತೂಕದ 9 ಲಕ್ಷ ರೂ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರುಗಳು, 4 ಮೊಬೈಲ್ ಫೋನ್ ಗಳು, ಪಿಸ್ತೂಲ್-1, ಸಜೀವ ಗುಂಡು-1, ಡ್ರಾಗನ್ ಚೂರಿಗಳು-2, ಡಿಜಿಟಲ್ ತೂಕ ಮಾಪನ ಮತ್ತು ರೂ. 22,050 ನಗದು ವಶಪಡಿಸಿಕೊಳ್ಳಲಾಗಿದೆ. ಗೋವಾ, ಮುಂಬೈನಿಂದ ಎಂಡಿಎಂಎ ಖರೀದಿಸಿ ಇಲ್ಲಿಗೆ ಪೂರೈಕೆ ಮಾಡಲು ಯತ್ನಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.