ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಐದನೇ ಆರೋಪಿ ಬಂಧನ

ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದಂತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿರುವ ನಾಲ್ವರು ಆರೋಪಿಗಳನ್ನು 11 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಕೃತ್ಯವನ್ನು ಖಂಡಿಸಿ ಮಣಿಪುರದ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಕುಕಿ–ಜೋ ಬುಡಕಟ್ಟು ಮಹಿಳೆಯರನ್ನು ಬೆತ್ತಲುಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳ ಮನೆಗೆ, ಅವರದ್ದೇ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿದ್ದರು.

No Comments

Leave A Comment