ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ

ಮಂಗಳೂರು: ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ನಡೆದಿದೆ.

ಶುಕ್ರವಾರ ಸಂಜೆ ಪಣಂಬೂರು ಬೀಚ್‌ಗೆ ಒಟ್ಟಿಗೆ ಬಂದಿದ್ದ ವೈದ್ಯಕೀಯ ಕಾಲೇಜಿನ ಇಬ್ಬರು ಹುಡುಗರು ಮತ್ತು ನಾಲ್ವರು ಹುಡುಗಿಯರನ್ನು ದ್ವಿಚಕ್ರವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ಯುವಕರ ತಂಡ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್(20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ.

ಗಾಯಗೊಂಡ ಹಫೀಜ್ ಪೊಲೀಸರಿಗೆ ದೂರು ನೀಡಿದ್ದು, ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಕೋರ್ಸ್ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಇದರಿಂದಾಗಿ ಕಿಡಿಗೇಡಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಜೂನ್‍ನಲ್ಲಿ ಸಹ ಸೋಮೇಶ್ವರ ಬೀಚ್‍ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಕೆಲವರು ಹಲ್ಲೆ ನಡೆಸಿದ್ದು ವರದಿಯಾಗಿತ್ತು.

No Comments

Leave A Comment