ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಕ್ರಿಕೆಟ್ ಬುಕ್ಕಿಯಿಂದ ಉದ್ಯಮಿಗೆ 58 ಕೋಟಿ ರೂಪಾಯಿಗಳ ಮಹಾ ವಂಚನೆ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಬುಕ್ಕಿಯೋರ್ವ ಮಹಾರಾಷ್ಟ್ರ ಉದ್ಯಮಿಗೆ ಬರೊಬ್ಬರಿ 58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಘಟನೆ ವರದಿಯಾಗಿದೆ.

ಟ್ಯಾಂಪರ್ ಮಾಡಿದ ಬ್ಯಾಟಿಂಗ್ ಆಪ್ ಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿ,  58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗೋಂಡಿಯಾ ಮೂಲದ ವಂಚಕನ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯ ಮನೆಯ ಮೇಲೆ ಪೊಲೀಸರ ತಂಡ ದಾಳಿ ನಡೆಸಿದ್ದು, ಆರೋಪಿಯನ್ನು ಅನಂತ್ ಜೈನ್ ಅಲಿಯಾಸ್ ಶೋಂಟು ಎಂದು ಗುರುತಿಸಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ ಎಂದು ಹೇಳಿದ್ದಾರೆ. ದಾಳಿ ನಡೆಸಿದ ತಂಡವು ಅವರ ಮನೆಯಲ್ಲಿ 17 ಕೋಟಿ ರೂಪಾಯಿಗೂ ಹೆಚ್ಚು ನಗದು, ಚಿನ್ನ ಮತ್ತು ಬೆಳ್ಳಿಯನ್ನು ವಶಪಡಿಸಿಕೊಂಡಿದೆ.

ನಾಗ್ಪುರ ಪೊಲೀಸ್ ತಂಡ (ಅನಂತ್ ಜೈನ್ ) ನಿವಾಸದ ಮೇಲೆ ದಾಳಿ ನಡೆಸಿದೆ. ಪೊಲೀಸರು ದಾಳಿ ನಡೆಸುವುದಕ್ಕೂ ಮುನ್ನವೇ ಆರೋಪಿ ಪರಾರಿಯಾಗಿದ್ದ, ತನಿಖೆ ಪ್ರಗತಿಯಲ್ಲಿದೆ ಎಂದು ನಾಗ್ಪುರದ ಸಿಪಿ ಅಮಿತೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಇನ್ನೂ ಹಲವರು ಆರೋಪಿಯಿಂದ ವಂಚನೆಗೊಳಗಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕ್ರೈಂ ಬ್ರಾಂಚ್ ಮತ್ತು ಸೈಬರ್ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವು ಅಕ್ರಮ ಅಂತರಾಷ್ಟ್ರೀಯ ವ್ಯಾಪಾರದ ಬಗ್ಗೆ ತನಿಖೆ ನಡೆಸಲಿದೆ ಎಂದು ಸಿಪಿ ಅಮಿತೇಶ್ ಕುಮಾರ್ ಹೇಳಿದ್ದಾರೆ, ಇದು ದುಬೈನಿಂದ ಕಾರ್ಯನಿರ್ವಹಿಸುತ್ತಿದೆ ಮತ್ತು ಭಾರತದಾದ್ಯಂತ ತನ್ನ ಜಾಲವನ್ನು ಹರಡುತ್ತಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

No Comments

Leave A Comment