ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಬಿಹಾರ: ಕೊಳವೆ ಬಾವಿಗೆ ಬಿದ್ದ ಮೂರು ವರ್ಷದ ಬಾಲಕನ ರಕ್ಷಣೆ, ಆಸ್ಪತ್ರೆಗೆ ರವಾನೆ!
ಪಟ್ನಾ: ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದಿದ್ದ ಮೂರು ವರ್ಷದ ಮಗುವನ್ನು ರಕ್ಷಿಸಲಾಗಿದೆ. ಸತತ 5 ಗಂಟೆಗಳ ಕಾಲ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ ಮೂಲಕ ಬಾಲಕನನ್ನು ರಕ್ಷಿಸಲಾಗಿದೆ.
ಬಾಲಕ ಆರೋಗ್ಯವಾಗಿದ್ದು, ಕೊಳವೆ ಬಾವಿಯಿಂದ ಸುರಕ್ಷಿತ ಮೇಲಕ್ಕೆತ್ತಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ನಳಂದ ಎನ್ ಡಿಆರ್ ಎಫ್ ಅಧಿಕಾರಿ ರಂಜೀತ್ ಕುಮಾರ್ ತಿಳಿಸಿದ್ದಾರೆ.
ರೈತರೊಬ್ಬರಿಗೆ ಸೇರಿದ ಕೊಳವೆ ಬಾವಿ ಮುಚ್ಚದ ಕಾರಣ ಶಿವಂ ಕುಮಾರ್ ಎಂಬ ಮಗು ಅದರೊಳಗೆ ಬಿದ್ದಿತ್ತು. ಆದರೊಂದಿಗೆ ಜೊತೆಗೆ ಆಟವಾಡುತ್ತಿದ್ದ ಮಕ್ಕಳು ಮಗುವಿನ ಪೋಷಕರಿಗೆ ಮಾಹಿತಿ ನೀಡಿದ್ದರು. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು.
ಮಗುವಿಗೆ ಆಮ್ಲಜನಕ ಪೂರೈಸುವ ಮೂಲಕ ಸುರಕ್ಷಿತವಾಗಿ ಮೇಲಕ್ಕೆಲಾಗಿದೆ. ತಕ್ಷಣವೇ ಅಲ್ಲಿಯೇ ಇದ್ದ ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.