``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......
ಆರ್‌ಎಸ್ಎಸ್ ನಾಯಕ ಮದನ್ ದಾಸ್ ದೇವಿ ಬೆಂಗಳೂರಿನಲ್ಲಿ ನಿಧನ, ಪ್ರಧಾನಿ ಮೋದಿ ಸಂತಾಪ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ಮದನ್ ದಾಸ್ ದೇವಿ ಸೋಮವಾರ ಬೆಳಗ್ಗೆ ಇಲ್ಲಿ ನಿಧನರಾದರು.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಷ್ಟ್ರ ಮೂಲದ 81 ವರ್ಷ ವಯಸ್ಸಿನ ಹಿಂದುತ್ವ ಸಿದ್ಧಾಂತವಾದಿ ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಆರ್‌ಎಸ್‌ಎಸ್ ಕಾರ್ಯಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ದೇವಿ ಅವರ ಪಾರ್ಥೀವ ಶರೀರವನ್ನು ಆರ್‌ಎಸ್‌ಎಸ್ ಸ್ಥಳೀಯ ಪ್ರಧಾನ ಕಛೇರಿ ಕೇಶವ ಕೃಪಾದಲ್ಲಿ ಮಧ್ಯಾಹ್ನ 1.30ರಿಂದ ಸಂಜೆ 4ರವರೆಗೆ ಅಂತಿಮ ದರ್ಶನಕ್ಕೆ ಇರಿಸಲಾಗುವುದು ಮತ್ತು ಮಂಗಳವಾರ ಅಂತಿಮ ವಿಧಿವಿಧಾನಗಳಿಗಾಗಿ ಪುಣೆಗೆ ಕೊಂಡೊಯ್ಯಲಾಗುವುದು ಎಂದು ಅವರು ಹೇಳಿದರು.
ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಲ್ಲಿ ನಾಯಕತ್ವ ಕೌಶಲ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಮದನ್ ದಾಸ್ ದೇವಿ ಪ್ರಮುಖ ಪಾತ್ರ ವಹಿಸಿದ್ದರು. ಪೂರ್ಣಾವಧಿ ಪ್ರಚಾರಕ (ಪ್ರಚಾರಕ) ರಾಗಿದ್ದ ದೇವಿ ಅವರು ತಮ್ಮ ವಯೋಸಹಜ ಖಾಯಿಲೆಗಳಿಂದಾಗಿ ಚಿಕಿತ್ಸೆ ಪಡೆಯಲು ಬೆಂಗಳೂರಿನಲ್ಲಿ ತಂಗಿದ್ದರು.
ಆರ್‌ಎಸ್‌ಎಸ್ ಜಂಟಿ ಪ್ರಧಾನ ಕಾರ್ಯದರ್ಶಿ ಮತ್ತು ಆರ್‌ಎಸ್‌ಎಸ್ ವಿದ್ಯಾರ್ಥಿ ವಿಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘಟನೆಯ ಕಾರ್ಯದರ್ಶಿಯಾಗಿಯೂ ದೇವಿ ಅವರು ಸೇವೆ ಸಲ್ಲಿಸಿದ್ದರು.
ಇಂದು ನೀವು ನೋಡುತ್ತಿರುವ ರಾಷ್ಟ್ರ ಮಟ್ಟದ ಬಿಜೆಪಿ ನಾಯಕರಲ್ಲಿ ನಾಯಕತ್ವದ ಕೌಶಲ್ಯವನ್ನು ಅಭಿವೃದ್ಧಿಪಡಿಸುವಲ್ಲಿ ದೇವಿ ಅವರು ಜವಾಬ್ದಾರರಾಗಿದ್ದರು ಎಂದು ಆರ್‌ಎಸ್‌ಎಸ್ ಕಾರ್ಯಕಾರಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಂತಾಪ
ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ‘ಶ್ರೀ ಮದನ್ ದಾಸ್ ದೇವಿ ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ಅವರು ತಮ್ಮ ಇಡೀ ಜೀವನವನ್ನು ದೇಶ ಸೇವೆಗೆ ಮುಡಿಪಾಗಿಟ್ಟಿದ್ದರು. ನಾನು ಅವರ ಜೊತೆ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಅವರಿಂದ ಅನೇಕ ವಿಷಯಗಳನ್ನು ಕಲಿಯುವ ಅವಕಾಶವೂ ಸಿಕ್ಕಿತು. ಈ ದುಃಖದ ಸಮಯದಲ್ಲಿ ಎಲ್ಲಾ ಕಾರ್ಯಕರ್ತರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ದೇವರು ದುಖಃ ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ’ ಎಂದಿದ್ದಾರೆ.
ಆರ್‌ಎಸ್‌ಎಸ್ ತನ್ನ ಸಂದೇಶದಲ್ಲಿ, ‘ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಶ್ರೀ ಮದನ್ ದಾಸ್ ದೇವಿ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಬೆಳಿಗ್ಗೆ 5 ಗಂಟೆಗೆ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು ಎಂದಿದೆ.