Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಕಾರ್ಕಳ: ಬಸ್ ಮತ್ತು ಟಿಪ್ಪರ್ ನಡುವೆ ಅಪಘಾತ: ಬಸ್ ಚಾಲಕನಿಗೆ ಗಂಭೀರ ಗಾಯ

ಕಾರ್ಕಳ:ಜು 24. ಬೈಲೂರು ಸಮೀಪದ ಜಾರ್ಕಳ ಬಸ್ರಿಶಾಲೆ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಬಸ್ಸು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಬಸ್ಸು ಚಾಲಕ ತೀವ್ರ ಸ್ವರೂಪದಲ್ಲಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ‌ ಸಂಭವಿಸಿದೆ.

ಉಡುಪಿಯಿಂದ ಕಾರ್ಕಳ ಕಡೆ ಬರುತ್ತಿದ್ದ ಖಾಸಗಿ ಬಸ್ಸೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿ ಸಿ) ಬಸ್ಸನ್ನು ಹಿಂತಿಕುವ ಭರದಲ್ಲಿ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಲಾಯಿಸಿ ಬಂದು ಬಸ್ರಿಶಾಲಾ ತಿರುವಿನಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ.

ಇನ್ನು ಅಪಘಾತದ ತೀವ್ರತೆಗೆ ಬಸ್ಸು ಚಾಲಕ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ. ಪ್ರಯಾಣಿಕರು ಹಾಗೂ ಟಿಪ್ಪರ್ ಚಾಲಕ ಸಣ್ಣಪುಟ್ಟ ರೀತಿಯಲ್ಲಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಆಗಮಿಸಿದ್ದಾರೆ.

No Comments

Leave A Comment