ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕರ್ನಾಟಕದಲ್ಲಿ ಭಾರಿ ಮಳೆ: 5 ಸಾವು; ಕರಾವಳಿ, ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಂಭವಿಸಿದ ವಿವಿಧ ದುರಂತಗಳಲ್ಲಿ ಈ ವರೆಗೂ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಹೌದು.. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಸ್ಥಗಿತಗೊಂಡಿದ್ದು, ಕುಶಾಲನಗರ ಮತ್ತು ಬೆಳಗಾವಿ ನಗರಗಳ ವಸತಿ ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿದೆ. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಸಂಬಂಧಿತ ದುರಂತಗಳಿಂದ ಐದು ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳು ತತ್ತರಿಸಿದ್ದು, ಅಂತೆಯೇ ವಿವಿಧ ಮಳೆ ಸಂಬಂಧಿತ ದುರಂತಗಳಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ. ಮಲ್ಲಪ್ಪ ಶರಣಪ್ಪ ಕರೆಪನೋರ್ (25) ಹೊಳೆ ದಾಟುವಾಗ ಕೊಚ್ಚಿಕೊಂಡು ಹೋಗಿದ್ದಾರೆ. ಈತ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರ(ಆರ್) ಗ್ರಾಮದ ನಿವಾಸಿಯಾಗಿದ್ದು, ಆತನಿಗಾಗಿ ಶೋಧ ಮುಂದುವರಿದಿದೆ.

ಅಂತೆಯೇ ಮಂಜುನಾಥ ಬಸವರಾಜ ಆನಂದಿ (27) ಎಂಬಾತ ತುಂಗಭದ್ರಾ ನದಿಯಲ್ಲಿ ದಡದಲ್ಲಿ ಕೈ ಸ್ವಚ್ಛಗೊಳಿಸಲು ಮುಂದಾದಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಾಕನೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬೀರಾಳ್ (ಬಿ) ಗ್ರಾಮದ ನಿವಾಸಿ ಬಸಮ್ಮ (40) ಎಡೆಬಿಡದೆ ಸುರಿದ ಮಳೆಗೆ ಮನೆ ಕುಸಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿಯ ರಾಮತೀರ್ಥ ನದಿಯಲ್ಲಿ ಈಜಲು ಯತ್ನಿಸಿದ ಮಣಿಕಂಠ ಮಂಜುನಾಥ ನಾಯ್ಕ್ (17) ಕೊಚ್ಚಿಕೊಂಡು ಹೋಗಿದ್ದಾರೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಜಲಮೂಲಗಳ ಬಳಿ ಹೋಗದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಅರಸಿನಗುಂಡಿ ಜಲಪಾತ ವೀಕ್ಷಣೆ ವೇಳೆ ಶರತ್ ಕುಮಾರ್ (23) ಮೃತಪಟ್ಟಿದ್ದು, ಶರತ್ ನದಿಯ ದಡದಲ್ಲಿ ನಿಂತಿದ್ದಾಗ ಆಯತಪ್ಪಿ ಬಿದ್ದು ಕೊಚ್ಚಿಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿದೆ. ಅವರ ಮೃತದೇಹಕ್ಕಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಈ ಎಲ್ಲಾ ಘಟನೆಗಳು ಕಳೆದ 24 ಗಂಟೆಗಳಲ್ಲಿ ನಡೆದಿವೆ.

6 ಜನರ ಕುಟುಂಬ ಪವಾಡ ಸದೃಶ ಪಾರು
ಮನೆ ಕುಸಿದು ಬೀಳುವ ಕೆಲವೇ ಕ್ಷಣಗಳ ಮೊದಲು ಆರು ಜನರ ಕುಟುಂಬವೊಂದು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಳಿಯ ವಿಜಯಪುರ ಕಾಲೋನಿಯಲ್ಲಿ ಘಟನೆ ವರದಿಯಾಗಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಿದೆ. ಪಶ್ಚಿಮ ಘಟ್ಟದಲ್ಲಿ ಸುರಿದ ಭಾರೀ ಮಳೆಗೆ ಬೆಳಗಾವಿ ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತವಾಗಿವೆ. ಜಿಲ್ಲೆಯ ಚಿಕ್ಕೋಡಿ ಪ್ರದೇಶದಲ್ಲಿ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನರು ದೇವಾಲಯಗಳಿಗೆ ಭೇಟಿ ನೀಡಿ ಎದೆಮಟ್ಟದ ನೀರಿನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬೆಳಗಾವಿ ನಗರದ ಹಲವು ಪ್ರದೇಶಗಳು ಜಲಾವೃತವಾಗಿವೆ.

ಭಾರಿ ಮಳೆ: ರಜೆ ಘೋಷಣೆ
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಾರಂಗಿ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದರಿಂದ ಕೊಡಗು ಜಿಲ್ಲೆಯ ಕುಶಾಲನಗರದ ಸಾಯಿ ಪ್ರದೇಶಕ್ಕೆ ನೀರು ನುಗ್ಗಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 118 ಮಿ.ಮೀ ಮಳೆಯಾಗಿದೆ. ಅಧಿಕಾರಿಗಳು ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ವಾರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕರ್ನಾಟಕ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೋಮವಾರ ತಿಳಿಸಿದ್ದಾರೆ.

ಭೈರೇಗೌಡ ಅವರು ಉನ್ನತ ಅಧಿಕಾರಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರೀ ಮಳೆಯ ಹಿನ್ನೆಲೆಯಲ್ಲಿ ಸಂಭವಿಸಿದ ದುರಂತಗಳಿಂದ 27 ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡದಲ್ಲಿ ಒಂದು ಪರಿಹಾರ ಶಿಬಿರ ತೆರೆಯಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ಶಿಬಿರಗಳನ್ನು ತೆರೆಯಲಾಗಿದೆ ಎಂದು ಸಚಿವರು ತಿಳಿಸಿದರು. 27 ಸತ್ತವರ ಪೈಕಿ ಎಂಟು ಮಂದಿ ಗುಡುಗು ಸಿಡಿಲಿನಿಂದ ಸಾವನ್ನಪ್ಪಿದ್ದಾರೆ, ಅನೇಕರು ನದಿ ತೊರೆಗಳಿಗೆ ಜಾರಿದ್ದಾರೆ. ರಾಜ್ಯದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಲು ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು. “ನಾವು ಎಲ್ಲಾ ಜಿಲ್ಲೆಗಳ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಳೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಅವರು ಮುಂದಿನ ವಾರದಲ್ಲಿ ಹೈ ಅಲರ್ಟ್ ಮೋಡ್‌ನಲ್ಲಿರಬೇಕು. ಮುಂಗಾರು ಮಳೆ ಮುಂದಿನ ದಿನಗಳಲ್ಲಿ ಧಾರಾಕಾರವಾಗಿ ಸುರಿಯಲಿದೆ. ಕರಾವಳಿ ಮತ್ತು ಬೆಳಗಾವಿ ಭಾಗದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೀದರ್, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದೆ” ಎಂದು ಅವರು ಹೇಳಿದರು.

ಕರಾವಳಿ, ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಎಲ್ಲಾ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಪ್ರದೇಶಗಳಿಗೆ ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಮತ್ತು ರಸ್ತೆಗಳಿಗೆ ಹಾನಿ, ದುರ್ಬಲ ರಚನೆಗಳು ಮತ್ತು ಮರಗಳನ್ನು ಕಿತ್ತುಹಾಕುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಇದುವರೆಗೆ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 20 ಡಿಗ್ರಿ ಸೆಲ್ಸಿಯಸ್‌ನಲ್ಲಿ ನೆಲೆಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಅಂತೆಯೇ ಇದೇ ವೇಳೆ ಮಲೆನಾಡು ಪ್ರದೇಶದಿಂದ ಹುಟ್ಟುವ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಚಿಕ್ಕಮಗಳೂರಿನ ಶೃಂಗೇರಿ ಪೀಠದ ಶಂಕರಾಚಾರ್ಯರ ಸಂಧ್ಯಾವಂದನಾ ಮಂಟಪ ಸಂಪೂರ್ಣ ಜಲಾವೃತಗೊಂಡಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡದ ಜೀವನಾಡಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಕಾವೇರಿ ನದಿ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಿದೆ. ರಾಜ್ಯದ ಹಲವು ಅಣೆಕಟ್ಟುಗಳು ಮತ್ತು ಪ್ರಮುಖ ಕೆರೆಗಳು ಸಂಪೂರ್ಣ ಭರ್ತಿಯಾಗಿವೆ.

ಮಳೆ ಪೀಡಿತ ಜಿಲ್ಲೆಗಳಲ್ಲಿ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿವೆ. ತುರ್ತು ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

kiniudupi@rediffmail.com

No Comments

Leave A Comment