ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯಲ್ಲಿ ಆರು ಮಸೂದೆ ಮಂಡನೆ
ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.
ಪೇಪರ್ ಗಳನ್ನು ಹಾಕಿದ ಕೂಡಲೇ ಸ್ಪೀಕರ್ ಓಂ ಬಿರ್ಲಾ ಅವರು, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರಿಗೆ ಜನನ ಮತ್ತು ಮರಣಗಳ ನೋಂದಣಿ(ತಿದ್ದುಪಡಿ) ಮಸೂದೆ, 2023 ಅನ್ನು ಮಂಡಿಸುವಂತೆ ಕೇಳಿಕೊಂಡರು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ನ ಮನೀಶ್ ತಿವಾರಿ ಅವರು, ಹಾಗೆ ಮಾಡಲು ಸದನಕ್ಕೆ “ಶಾಸಕಾಂಗ ಸಾಮರ್ಥ್ಯ” ಇಲ್ಲ ಎಂದು ಪ್ರತಿಪಾದಿಸಿದರು ಮತ್ತು ಈ ಕ್ರಮವು ಖಾಸಗಿತನ ಮತ್ತು ಅಧಿಕಾರದ ಪ್ರತ್ಯೇಕತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದರು.
ನಂತರ, ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆ ಇತರ ಐದು ಮಸೂದೆಗಳನ್ನು ಮಂಡಿಸಲಾಯಿತು.
ನಿತ್ಯಾನಂದ ರೈ ಅವರು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ(ತಿದ್ದುಪಡಿ) ಮಸೂದೆ, 2023 ಅನ್ನು ಧ್ವನಿ ಮತದ ನಂತರ ಮಂಡಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನ್ಯಾಷನಲ್ ಕಾನ್ಫರೆನ್ಸ್ನ ಹಸ್ನೈನ್ ಮಸೂದಿ ಅವರು, ಮರುಸಂಘಟನೆ ಕಾಯಿದೆ “ಸಾಂವಿಧಾನಿಕವಾಗಿ ಶಂಕಿತ ಕಾನೂನು” ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರ ವಿಚಾರ ಸುಪ್ರೀಂ ಕೋರ್ಟ್ ನಲ್ಲಿರುವುದರಿಂದ ನ್ಯಾಯಾಂಗ ನಿಂದನೆಯಾಗಲಿದೆ. ನ್ಯಾಯಾಂಗ ಪರಿಶೀಲನೆಯಲ್ಲಿರುವ ಕಾಯ್ದೆಗೆ ತಿದ್ದುಪಡಿ ತರುವುದು ಸಾಂವಿಧಾನಿಕ ಔಚಿತ್ಯಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ನಂತರ ಕೇಂದ್ರ ಸಚಿವರಾದ ವೀರೇಂದ್ರ ಕುಮಾರ್ ಮತ್ತು ಅರ್ಜುನ್ ಮುಂಡಾ ಅವರು ಕ್ರಮವಾಗಿ ಸಂವಿಧಾನ(ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಜಾತಿಗಳ ಆದೇಶ (ತಿದ್ದುಪಡಿ) ಮಸೂದೆ, 2023 ಮತ್ತು ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಪಂಗಡಗಳ ಆದೇಶ (ತಿದ್ದುಪಡಿ) ಮಸೂದೆ, 2023 ಅನ್ನು ಮಂಡಿಸಿದರು.