ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಉಡುಪಿ: ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲೀಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ, ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಮಲ್ಪೆ ಠಾಣಾ ಪಿಎಸ್‌ ಐ ರವರು ಸ್ವಯಂ ಪ್ರೇರಿತವಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮು ದ್ವೇಷ ಉಂಟು ಮಾಡಿ ಸೌಹಾರ್ಧತೆಗೆ ಧಕ್ಕೆಯುಂಟಾಗುವ ಕೃತ್ಯದ ಅಡಿಯಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಉಡುಪಿ ಎಸ್’ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment