ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ಇಲ್ಲಿಗೆ ಬರುವಷ್ಟು ಘಟನೆ ಮುಖ್ಯವಾಗಿದೆಯೇ?: ಖುಷ್ಬೂ ಭೇಟಿಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ
ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊವನ್ನು ಶೌಚಾಲಯದಲ್ಲಿ ಸಹಪಾಠಿಗಳು ಚಿತ್ರೀಕರಿಸಿದ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ.
ಘಟನೆ ನಡೆದಿರುವ ನೇತ್ರ ಜ್ಯೋತಿ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ ಖುಷ್ಬೂ ಸುಂದರಂ ಇಂದು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಈ ಬಗ್ಗೆ ಸುದ್ದಿಗಾರರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರ ಪ್ರತಿಕ್ರಿಯೆ ಕೇಳಿದಾಗ, ರಾಷ್ಟ್ರೀಯ ಮಹಿಳಾ ಆಯೋಗದವರು ಮಣಿಪುರಕ್ಕೆ ಹೋಗಿಲ್ಲ; ಇಲ್ಲಿಗೆ ಬಂದಿದ್ದಾರೆ ಎಂದು ಇದೇ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಗುಡುಗಿದರು.
ಮಹಿಳಾ ಆಯೋಗದವರು ಬರಲಿ, ಬೇಡ ಅನ್ನಲು ನಾನಾರು, ಆದರೆ ಇದಕ್ಕೆ ಇಷ್ಟೊಂದು ಪ್ರಾಮುಖ್ಯತೆ ನೀಡುವವರು ಮಣಿಪುರದಲ್ಲಿ ಪರಿಸ್ಥಿತಿ ಏನಾಗಿದೆ, ಅಲ್ಲಿ ಮಹಿಳೆಯರ ಮೇಲೆ ಯಾವ ರೀತಿ ದೌರ್ಜನ್ಯ ನಡೆದಿದೆ ಎಂದು ಗೊತ್ತಿದ್ದರೂ ಇದುವರೆಗೆ ಹೋಗಿ ವಿಚಾರಿಸಿಲ್ಲ ಎಂದು ಆರೋಪಿಸಿದ್ದಾರೆ.
ಉಡುಪಿಯಲ್ಲಿ ವಿಡಿಯೋ ಚಿತ್ರೀಕರಣ ಮಕ್ಕಳ ಆಟ ಅಂತಾ ಹೇಳಿಲ್ಲ. ಸ್ನೇಹಿತರ ಮಧ್ಯೆ ಘಟನೆಗಳು ನಡೆಯುತ್ತೆ, ಅದು ಅಲ್ಲಿಗೆ ಮುಗಿಯುತ್ತೆ. ಪ್ರಕರಣದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಹೆಚ್ಚಿನ ಕ್ರಮ ತೆಗೆದುಕೊಳ್ಳುತ್ತಾರೆ. ಈಗಾಗಲೇ ಸಸ್ಪೆಂಡ್ ಮಾಡಿದ್ದಾರೆ, ಹೆಚ್ಚಿನ ಕ್ರಮ ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶಿಸಲ್ಲ, ಅವರೇ ದೂರು ದಾಖಲಿಸುತ್ತಾರೆ. ಈಗಾಗಲೇ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಸತ್ಯತೆ ಎಲ್ಲವೂ ಹೊರಬರಲಿದೆ ಎಂದಿದ್ದಾರೆ.