ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವು: 10 ಮಂದಿಗೆ ಗಾಯ
ರಾಂಚಿ: ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಸಂಭ್ರಮದ ನಡುವೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟಿದ್ದಾರೆ 10 ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಖೆಟ್ಕೊ ಎನ್ನುವ ಗ್ರಾಮದಲ್ಲಿ ಮೆರವಣಿಗೆ ವೇಳೆ ಕಬ್ಬಿಣದಿಂದ ಮಾಡಿದ ಧಾರ್ಮಿಕ ಧ್ವಜವು 11 ಸಾವಿರ ವೋಲ್ಟ್‌ನ ವಿದ್ಯುತ್ ತಂತಿಗೆ ತಾಗಿದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಬೊಕಾರೊಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಹೇಳಿದ್ದಾರೆ.
10 ಮಂದಿಗೆ ಸುಟ್ಟಗಾಯಗಳಾಗಿವೆ. ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದ ತಾಜಿಯಾ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಈ ದುರಂತ ನಡೆದಿದೆ ಎಂದು ಹೇಳಲಾಗಿದೆ, ಇದೀಗ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ, ಇನ್ನೂ ಸ್ಥಳಕ್ಕೆ ಧಾವಿಸಿದ ಬೊಕಾರೊನ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಅವರು ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಘಟನೆಯ ಬಗ್ಗೆ ವರದಿ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಮೊಹರಂ ಮೆರವಣಿಗೆ ಪ್ರಾರಂಭವಾಗಿತ್ತು.