ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ : ಆರೋಪಿಯ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲ ಬೋಳಿಯಾರ್ ನಲಿಕೆದ ಗುಡ್ಡೆ ಮನೆಯ ಮಹಮ್ಮದ್ ಆರೀಫ್(28)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಮ್ಮದ್ ಆರೀಫ್ ಮುಡಿಪು ಕಂಬಳಪದವು ಕೆಐಎಡಿಬಿ ರಸ್ತೆ ಪರಿಸರದಲ್ಲಿ ಎಂಡಿಎಂಎ ಡ್ರಗ್ಸ್‌ನ್ನು ಕಾರಿನಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಲಾಗಿದೆ. ಆತನಿಂದ 1.25 ಲ.ರೂ. ಮೌಲ್ಯದ ಒಟ್ಟು 25 ಗ್ರಾಂ ಎಂಡಿಎಂಎ, ಕಾರು, ಮೊಬೈಲ್ ಪೋನ್, ಡಿಜಿಟಲ್ ತೂಕಮಾಪನ ಸೇರಿದಂತೆ ಒಟ್ಟು ಅಂದಾಜು 6,35,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿತ್ತು.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್‌ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ.ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.