ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಇಸ್ರೋ: ಸಿಂಗಾಪುರದ 7 ಉಪಗ್ರಹಗಳ ಹೊತ್ತು ಯಶಸ್ವಿಯಾಗಿ ಉಡಾವಣೆಯಾದ ಪಿಎಸ್ಎಲ್ವಿ-ಸಿ56
ಶ್ರೀಹರಿಕೋಟಾ: 7 ವಿದೇಶಿ ಉಪಗ್ರಹಗಳನ್ನು ಹೊತ್ತು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಪಿಎಸ್ಎಲ್ವಿ-ಸಿ56 ರಾಕೆಟ್ ಯಶಸ್ವಿಯಾಗಿ ಉಡಾವಣೆಯಾಗಿದೆ.
ಚಂದ್ರಯಾನ-3 ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಮತ್ತೊಂದು ರಾಕೆಟ್ ಉಡಾವಣೆ ಮಾಡಿದ್ದು, ಸಿಂಗಾಪೂರದ ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ವಿ-ಸಿ56 ರಾಕೆಟ್ ಅನ್ನು ಇಂದು ಬೆಳಗ್ಗೆ 6.30ಕ್ಕೆ ಆಂಧ್ರ ಪ್ರದೇಶದದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ (ಎಸ್ಡಿಎಸ್ಸಿ) ದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಇಂದು ಬೆಳಗ್ಗೆ 6.30ಕ್ಕೆ ಪಿಎಸ್ ಎಲ್ ವಿ ರಾಕೆಟ್ ಉಡಾವಣೆಯಾಗಿದ್ದು, ಎಲ್ಲ ಉಪಗ್ರಹಗಳನ್ನು ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದೆ. ಎಲ್ಲಾ ಉಪಗ್ರಹಗಳನ್ನು 5 ಕಕ್ಷೆಯ ಇಳಿಜಾರಿನೊಂದಿಗೆ 535 ಕಿಮೀ ವೃತ್ತಾಕಾರಕ್ಕೆ ಸೇರಿಸಲಾಗುತ್ತದೆ ಎಂದು ಇಸ್ರೋ ಹೇಳಿಕೆಯಲ್ಲಿ ತಿಳಿಸಿದೆ.
ಇದು ಇಸ್ರೋದ 56ನೇ ಕಾರ್ಯಾಚರಣೆಯಾಗಿದ್ದು, ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ ಎಲ್ ವಿ) ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಸದ್ಯ ಉಡಾವಣೆ ಮಾಡಲಾಗಿರುವ ರಾಕೆಟ್ನ ಮೇಲಿನ ಹಂತವನ್ನು ಕಡಿಮೆ ಕಕ್ಷೆಯಲ್ಲಿ ಇರಿಸಿ, ಅದರಲ್ಲಿರುವ ಉಪಗ್ರಹಗಳನ್ನು ಸ್ಥಾಪಿಸಲಾಗುತ್ತದೆ ಎಂದು ಇಸ್ರೋ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಇಸ್ರೋ, ‘PSLV-C56 ರಾಕೆಟ್ ಅನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಮೊದಲ ಉಡಾವಣಾ ಪ್ಯಾಡ್ (FLP) ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. PSLV-C56 / DS-SAR ಎಂಬುದು ಸಿಂಗಾಪುರದ ST ಇಂಜಿನಿಯರಿಂಗ್‌ಗಾಗಿ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್‌ನ (NSIL) ಮೀಸಲಾದ ಕಮರ್ಷಿಯಲ್ ಮಿಷನ್ ಆಗಿದೆ. ಈ DS-SAR ರಾಡಾರ್ ಇಮೇಜಿಂಗ್ ಅರ್ಥ್ ಅಬ್ಸರ್ವೇಶನ್ ಉಪಗ್ರಹವು, ಈ ಮಿಷನ್ನ ಪ್ರಾಥಮಿಕ ಉಪಗ್ರಹವಾಗಿದ್ದು, ಇದು ಎರಡು ಆಯಾಮದ ಚಿತ್ರಗಳನ್ನು ಅಥವಾ ವಸ್ತುಗಳ ಮೂರು ಆಯಾಮದ ಪುನರ್ ನಿರ್ಮಾಣಗಳನ್ನು ರಚಿಸುವ ಸಿಂಥೆಟಿಕ್ ಅಪರ್ಚರ್ ರಾಡಾರ್ ಹೊಂದಿದೆ.
ಇದು ಸೇರಿದಂತೆ ಸಿಂಗಾಪುರಕ್ಕೆ ಸಂಬಂಧಿಸಿದ 7 ಉಗ್ರಹಗಳನ್ನು ಸಹ PSLV-C56 ರಾಕೆಟ್ ಹೊತ್ತೊಯ್ದಿದೆ. DS-SAR ಉಪಗ್ರಹವನ್ನು DSTA (ಸಿಂಗಾಪೂರ್ ಸರ್ಕಾರವನ್ನು ಪ್ರತಿನಿಧಿಸುತ್ತದೆ) ಮತ್ತು ST ಇಂಜಿನಿಯರಿಂಗ್ ನಡುವಿನ ಪಾಲುದಾರಿಕೆಯ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಉಪಗ್ರಹವು ಸ್ಥಾಪನೆಯಾಗಿ ಕಾರ್ಯಾಚರಣೆ ಆರಂಭಿಸಿದ ನಂತರ ಸಿಂಗಾಪುರ ಸರ್ಕಾರದ ವಿವಿಧ ಏಜೆನ್ಸಿಗಳು ಉಪಗ್ರಹ ಚಿತ್ರಣಗಳನ್ನು ಬಳಸಿಕೊಳ್ಳಲಿವೆ ಎಂದು ಹೇಳಲಾಗಿದೆ.
ST ಇಂಜಿನಿಯರಿಂಗ್ ಕಂಪನಿಯು ತಮ್ಮ ವಾಣಿಜ್ಯ ಗ್ರಾಹಕರಿಗೆ ಬಹು-ಮಾದರಿ ಮತ್ತು ಹೆಚ್ಚಿನ ಪ್ರತಿಕ್ರಿಯೆ ಚಿತ್ರಣ ಮತ್ತು ಜಿಯೋಸ್ಪೇಷಿಯಲ್ ಸೇವೆಗಳಿಗಾಗಿ ಇದನ್ನು ಬಳಸುತ್ತದೆ. DS-SAR ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್ (IAI) ಅಭಿವೃದ್ಧಿಪಡಿಸಿದ ಸಿಂಥೆಟಿಕ್ ಅಪರ್ಚರ್ ರಾಡಾರ್ (SAR) ಪೇಲೋಡ್ ಅನ್ನು ಹೊಂದಿದೆ.