ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಕೋಲಾರದಿಂದ ರಾಜಸ್ಥಾನಕ್ಕೆ ಹೊರಟ್ಟಿದ್ದ ಟೊಮೆಟೊ ತುಂಬಿದ ಲಾರಿ ನಾಪತ್ತೆ! ದೂರು ದಾಖಲು
ಕೋಲಾರ: ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೋ 140 ರೂ.ಗೆ ಏರಿಕೆಯಾಗಿದೆ. ಇದರಿಂದಾಗಿ ಅಲಲ್ಲಿ ಟೊಮೆಟೊ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಟೊಮೆಟೊ ಮಾತ್ರವಲ್ಲದೇ ಅದನ್ನು ಸಾಗಿಸುವ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ.
ಇತ್ತೀಚಿಗೆ ಕೋಲಾರದಿಂದ ಚಿತ್ರದುರ್ಗಕ್ಕೆ ಟೊಮೆಟೊ ಸಾಗಿಸುತ್ತಿದ್ದ ವಾಹನ ಕಳ್ಳತನವಾಗಿತ್ತು. ಇದೀಗ ಅದೇ ರೀತಿಯಲ್ಲಿ ಸುಮಾರು 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ. ಜುಲೈ 27 ರಂದು ಕೋಲಾರದಿಂದ ರಾಜಸ್ಥಾನದ ರಾಜಧಾನಿ ಜೈಪುರಕ್ಕೆ ಹೊರಟ್ಟಿದ್ದ ಲಾರಿ ನಾಪತ್ತೆಯಾಗಿದೆ.
ಲಾರಿ ಚಾಲಕ ಮೊಬೈಲ್ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಮಂಡಿ ವ್ಯಾಪಾರಿಗಳು ಕೋಲಾರ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಮೆಹತ್ ಟ್ರಾನ್ಸ್ ಪೋರ್ಟ್ ಗೆ ಸೇರಿದ ಮುನಿರೆಡ್ಡಿ ಎಂಬವರಿಗೆ ಸೇರಿದ ಲಾರಿ ನಾಪತ್ತೆಯಾಗಿದೆ. ಇದರಿಂದ ಆತಂಕಗೊಂಡಿರುವ ವ್ಯಾಪಾರಿಗಳು ದೂರು ನೀಡಿದ್ದಾರೆ.