ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಣಿಪುರ ಹಿಂಸಾಚಾರ ಪ್ರಕರಣ: ಎಫ್ ಐಆರ್ ದಾಖಲಿಸುವಲ್ಲಿ ವಿಳಂಬಕ್ಕೆ ಸುಪ್ರೀಂ ಕಿಡಿ, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಡಿಜಿಪಿಗೆ ಸಮನ್ಸ್!

ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕುರಿತು ಎಫ್ ಐಆರ್ ದಾಖಲಿಸುವಲ್ಲಿ ವಿಳಂಬವಾಗಿರುವುದಕ್ಕೆ ಕಿಡಿಕಾರಿರುವ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆಯನ್ನು ಆಗಸ್ಟ್ 7 ರಂದು ನಿಗದಿಪಡಿಸಿದ್ದು, ಅಂದು ಮಧ್ಯಾಹ್ನ 2 ಗಂಟೆಗೆ ಮಣಿಪುರದ ಡಿಜಿಪಿ ನ್ಯಾಯಾಲಾಯದ ಮುಂದೆ ಹಾಜರಾಗಬೇಕು ಎಂದು ಸಮಗ್ರ ವಿವರ ಒದಗಿಸಬೇಕು ಎಂದು ನಿರ್ದೇಶಿಸಿದೆ.

ಮಣಿಪುರ ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದು, ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ವಿಡಿಯೋ ವೈರಲ್ ಆಗಿದ್ದು, ಈ  ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವಲ್ಲಿ ಬಹಳ ವಿಳಂಬವಾಗಿದೆ ಎಂಬುದು  ಸ್ಪಷ್ಟವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಮೌಖಿಕವಾಗಿ ಹೇಳಿದೆ.  ಮೇ ತಿಂಗಳಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಸ್ಫೋಟಗೊಂಡ ನಂತರ 6,523 ಎಫ್‌ಐಆರ್‌ಗಳನ್ನು ದಾಖಲಿಸಿದೆ ಎಂದು ಮಣಿಪುರ ಸರ್ಕಾರ ನ್ಯಾಯಪೀಠ ಪೀಠಕ್ಕೆ ತಿಳಿಸಿತು.

ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ,  ವಿಡಿಯೋ ಪ್ರಕರಣದಲ್ಲಿ ಬಾಲಾಪರಾಧಿ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ವೀಡಿಯೊ ವೈರಲ್ ಆದ ನಂತರ ಮಹಿಳೆಯರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

 250 ಜನರನ್ನು ಬಂಧಿಸಲಾಗಿದೆ  ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ  12,000 ಜನರನ್ನು  ಬಂಧಿಸಲಾಗಿದೆ ಸಾಲಿಸಿಟರ್ ಜನರಲ್ ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದರು. ಜುಲೈ 25 ರಂದು ಮಣಿಪುರ ಪರವಾಗಿ ಸಲ್ಲಿಸಲಾದ  ವರದಿಯಲ್ಲಿ 6,496 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂಬುದು ನ್ಯಾಯಾಲಯದಲ್ಲಿ ದಾಖಲಾಗಿದೆ. ಅಧಿಕೃತ ವರದಿಗಳ ಪ್ರಕಾರ 150 ಜನರು ಸಾವನ್ನಪ್ಪಿದ್ದು, 502 ಮಂದಿ ಗಾಯಗೊಂಡಿದ್ದಾರೆ, 5,101 ಬೆಂಕಿ ಹಚ್ಚಿದ ಪ್ರಕರಣಗಳು ಮತ್ತು 6,523 ಎಫ್‌ಐಆರ್‌ಗಳು ದಾಖಲಾಗಿವೆ. ಎಫ್‌ಐಆರ್‌ಗಳಲ್ಲಿ 252 ಜನರನ್ನು ಬಂಧಿಸಲಾಗಿದೆ ಮತ್ತು ಮುನ್ನೆಚ್ಚರಿಕೆ  ಕ್ರಮಗಳಿಗಾಗಿ 1,247 ಜನರನ್ನು ಬಂಧಿಸಲಾಗಿದೆ. 11 ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದೆ ಎಂದು ಸ್ಥಿತಿ ವರದಿ ತಿಳಿಸಿದೆ.

6,500 ಎಫ್‌ಐಆರ್‌ಗಳ ತನಿಖೆಯನ್ನು ಸಿಬಿಐಗೆ ವಹಿಸುವುದು ಅಸಾಧ್ಯ, ಇಲ್ಲದಿದ್ದರೆ ಅದು ಸಿಬಿಐ ಕಾರ್ಯವಿಧಾನದ ಸ್ಥಗಿತಕ್ಕೆ ಕಾರಣವಾಗುತ್ತದೆ ಎಂದು ಸುಪ್ರೀಂ ಹೇಳಿದೆ. ಅದೇ ಸಮಯದಲ್ಲಿ, ರಾಜ್ಯ ಪೊಲೀಸರನ್ನು ನಂಬಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.  ಎಷ್ಟು ಎಫ್‌ಐಆರ್‌ಗಳಲ್ಲಿ ಆರೋಪಿಗಳ ನಿರ್ದಿಷ್ಟ ಹೆಸರುಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಎಫ್‌ಐಆರ್‌ಗಳಲ್ಲಿ ಹೆಸರುಗಳಿದ್ದರೆ, ಅವರನ್ನು ಬಂಧಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ನ್ಯಾಯಾಲಯ ಕೇಳಿದೆ.

ಇದಕ್ಕೂ ಮೊದಲು, ಮಧ್ಯಾಹ್ನ 2 ಗಂಟೆಗೆ ಈ ವಿಷಯದ ಕುರಿತು ಅರ್ಜಿಗಳ ಒಂದು ಗುಂಪಿನ ವಿಚಾರಣೆಯನ್ನು ನಿಗದಿಪಡಿಸಲಾಗಿರುವುದರಿಂದ ಹಗಲಿನಲ್ಲಿ ಸಂತ್ರಸ್ತ ಮಹಿಳೆಯರ ಹೇಳಿಕೆಗಳನ್ನು ದಾಖಲಿಸುವುದನ್ನು ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿತು.

ಸೋಮವಾರ ಕುಕಿ ಬುಡಕಟ್ಟಿಗೆ ಸೇರಿದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬವಾದ ಬಗ್ಗೆ ಮಣಿಪುರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು.  ಶೂನ್ಯ ಎಫ್‌ಐಆರ್ ನೋಂದಣಿ ವಿಳಂಬದ ಬಗ್ಗೆ ಮಣಿಪುರ ಪೊಲೀಸರ ಪರಿಣಾಮಕಾರಿತ್ವವವನ್ನು ಭಾರತದ ಮುಖ್ಯ ನ್ಯಾಯಮೂರ್ತಿ  ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಪ್ರಶ್ನಿಸಿತ್ತು.

ಘಟನೆಯು ಮೇ 4 ರಂದು ಸಂಭವಿಸಿತು, ಆದರೆ ಎರಡು ವಾರಗಳ ನಂತರ ಮೇ 18 ರಂದು ಶೂನ್ಯ ಎಫ್‌ಐಆರ್ ದಾಖಲಿಸಲಾಗಿದೆ. “ಪೊಲೀಸರು ಎಫ್‌ಐಆರ್ ದಾಖಲಿಸಲು 14 ದಿನಗಳನ್ನು ಏಕೆ ತೆಗೆದುಕೊಂಡರು? ಮೇ 4 ರಿಂದ ಮೇ 18 ರವರೆಗೆ ಏನು ಮಾಡುತ್ತಿದ್ದರು ಎಂದು ಸಿಜೆಐ ಮೌಖಿಕವಾಗಿ ಪ್ರಶ್ನಿಸಿದ್ದರು. 6,000 ಎಫ್‌ಐಆರ್‌ಗಳ ವಿಭಜನೆ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಎಫ್‌ಐಆರ್‌ಗಳ ಸಂಖ್ಯೆಯನ್ನು ನೀಡುವಂತೆ ಪೀಠವು ರಾಜ್ಯ ಸರ್ಕಾರವನ್ನು ಕೇಳಿದೆ. ಅಲ್ಲದೇ ತನಿಖೆಯ ಪ್ರಗತಿ ಬಂಧನ ಮತ್ತು ಪೊಲೀಸರು ಇದುವರೆಗೆ ಕೈಗೊಂಡ ಕ್ರಮಗಳ ವಿವರಗಳನ್ನು ಕೇಳಿದೆ.

kiniudupi@rediffmail.com

No Comments

Leave A Comment