Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ಉಡುಪಿ: ಕಡಲ್ಕೊರೆತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ!

ಮಂಗಳೂರು: ಉಡುಪಿಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಕಡಲ್ಕೊರೆತದಿಂದ ಹಾನಿಗೊಳಗಾದ ಕರಾವಳಿ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದರು.

ಪಡುಬಿದ್ರಿ ಬೀಚ್ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದ ವ್ಯಾಪಕ ಹಾನಿ ಸಂಭವಿಸಿದ್ದು ಅಲ್ಲಿಗೆ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಜಿಲ್ಲೆಯ 98 ಕಿ.ಮೀ ಕರಾವಳಿಯ ರಕ್ಷಣೆಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಈ ವೇಳೆ ಉಡುಪಿ ಕಾಲೇಜಿನಲ್ಲಿ ವಾಶ್ ರೂಂ ವಿಡಿಯೋ ಪ್ರಕರಣದ ಕುರಿತು ಮಾತನಾಡಿದ ಅವರು, ಪ್ರಕರಣ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಮಧ್ಯೆ ನಾನು ಹೇಳಿಕೆ ನೀಡುವುದು ಸರಿಯಲ್ಲ. ತನಿಖೆ ಮುಗಿಯಲಿ ಎಂದರು. ಇನ್ನು ಈ ಸಂಬಂಧ ಕಾಲೇಜು ಆಡಳಿತ ಮಂಡಳಿಯಾಗಲಿ, ಸಂತ್ರಸ್ತ ಬಾಲಕಿಯಾಗಲಿ ಪ್ರಕರಣ ದಾಖಲಿಸಿಲ್ಲ ಎಂದರು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಜಿಹಾದಿ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದರು.

No Comments

Leave A Comment