ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಇಬ್ಬರ ಸಾವು, 36 ಮಂದಿ ಅಸ್ವಸ್ಥ

ಚಿತ್ರದುರ್ಗ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23 ವ) ಮತ್ತು ಯುವಕ ರಘು (27ವ) ಎಂದು ಗುರುತಿಸಲಾಗಿದೆ.

ಮಂಜುಳಾ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ನೀರು ಸೇವಿಸಿ ಬೆಂಗಳೂರಿಗೆ ತೆರಳಿದ್ದ ರಘು ತೀವ್ರ ರೋಗಲಕ್ಷಣಗಳನ್ನು ಕಂಡು ನಂತರ ಮೃತಪಟ್ಟಿದ್ದಾರೆ. ನಿನ್ನೆ ಈ ಘಟನೆ ನಡೆದಿದ್ದು, ನಗರಸಭೆಯಿಂದ ಪೂರೈಕೆಯಾಗುವ ನೀರನ್ನು ಸೇವಿಸದಂತೆ ಸ್ಥಳೀಯ ನಿವಾಸಿಗಳಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಕವಾಡಿಗರಹಟ್ಟಿಯಲ್ಲಿ ಬೀಡುಬಿಟ್ಟಿದ್ದು, ಯಾವುದೇ ಸಂದರ್ಭದಲ್ಲೂ ಚಿಕಿತ್ಸೆಗೆ ಸಹಾಯಕ್ಕೆ ಧಾವಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ನೀರು ಕಲುಷಿತಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಅಸ್ವಸ್ಥಗೊಂಡವರು ಕುಡಿದ ನೀರು, ಮಲ-ಮೂತ್ರ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

No Comments

Leave A Comment