ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಮೈಸೂರು ಪೇಟ, ಅಂಬಾರಿ ಕೊಟ್ಟು ಸನ್ಮಾನ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಈ ವೇಳೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾಸಿದರು.

ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾದರು.

ಇಂದು ಬೆಳಿಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಮೊದಲಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವಂತೆ ಮನವಿ ಮಾಡಿಕೊಂಡರು.

ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ‌ ಪ್ರತಿನಿಧಿ ಟಿ.ಬಿ. ಜಯಚಂದ್ರ ಉಪಸ್ಥಿತರಿದ್ದರು.

No Comments

Leave A Comment