ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
‘ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ’: ಜ್ಞಾನವ್ಯಾಪಿ ಸಮೀಕ್ಷೆಗೆ ಹೈಕೋರ್ಟ್ ಅನುಮತಿ
ಅಲಹಾಬಾದ್: ವಾರಾಣಸಿಯ ಜ್ಞಾನವಾಪಿ ಮಸೀದಿ(Gyanvapi Mosque)ಯಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, ‘ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ’ ಎಂದು ಹೇಳಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.
ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ತೀರ್ಪು ನೀಡಿದೆ. ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಆದರೆ ಸಮೀಕ್ಷಹೆಗೆ ಹೈಕೋರ್ಟ್ ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಲಾಗಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ಪ್ರಾರಂಭಿಸಲಾಗುವುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದೂ ಪರವಾಗಿ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದರು.
ಜುಲೈ 21 ರಂದು ವಾರಾಣಸಿಯ ನ್ಯಾಯಾಲಯವು ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಬಳಿಕ ಹೆಗ್ಗುರುತಾಗಿರುವ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವ ಏಕೈಕ ಮಾರ್ಗ ಸಮೀಕ್ಷೆ ಎಂದು ನಾಲ್ವರು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಆದೇಶ ನೀಡಿತ್ತು. ಈ ಮಸೀದಿಯು ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿಯೇ ಇದ್ದು, ಈ ಭೂಮಿ ಕೂಡ ಕಾಶಿ ವಿಶ್ವನಾಥ ದೇಗುಲಕ್ಕೆ ಸೇರಿದ ಭೂಮಿಯಾಗಿದ್ದು, ಇಲ್ಲಿ ಶಿವನ ದೇಗುಲವಿದೆ ಎಂದು ವಾದಿಸಿದ್ದರು.
ಜುಲೈ 24 ರಂದೇ ಇಲ್ಲಿ ಸಮೀಕ್ಷೆ ಪ್ರಾರಂಭವಾಯಿತು, ಆದರೆ ಮಸೀದಿ ಸಮಿತಿಯು ಅರ್ಜಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಕೆಲವೇ ಗಂಟೆಗಳಲ್ಲಿ ತಡೆ ನೀಡಿತು. ಈ ರಚನೆಯು ಸಾವಿರ ವರ್ಷಗಳಷ್ಟು ಹಳೆಯದಾಗಿದೆ ಮತ್ತು ಯಾವುದೇ ಅಗೆಯುವಿಕೆಯು ಅದನ್ನು ಅಸ್ಥಿರಗೊಳಿಸಬಹುದು, ಇದು ಅದರ ಕುಸಿತಕ್ಕೆ ಕಾರಣವಾಗಬಹುದು ಎಂದು ಮಸೀದಿ ಸಮಿತಿಯು ವಾದಿಸಿತ್ತು. ಅಂತಹ ಯಾವುದೇ ಸಮೀಕ್ಷೆಯು ಧಾರ್ಮಿಕ ಸ್ಥಳಗಳ ಸುತ್ತ ಇರುವ ಕಾನೂನುಗಳನ್ನು ಉಲ್ಲಂಘಿಸುತ್ತದೆ ಎಂದು ಸಮಿತಿಯು ಅರ್ಜಿಯಲ್ಲಿ ವಾದಿಸಿತ್ತು.