ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮಣಿಪುರ ಗಲಭೆ ಮರೆಮಾಚಲು ಉಡುಪಿ ಖಾಸಗಿ ವಿದ್ಯಾಸ೦ಸ್ಥೆಯಲ್ಲಿ ವಿಡಿಯೋ ಪ್ರಕರಣದ ಬಗ್ಗೆ ಜನರನ್ನು ದಿಕ್ಕುತಪ್ಪಿಸುವ ಕೆಲಸ ಬಿಜೆಪಿ,ಸ೦ಘಪರಿವದ್ದು-ಸುರೇಶ್ ಶೆಟ್ಟಿ ಬನ್ನ೦ಜೆ

ಉಡುಪಿ:ಮಣಿಪುರದಲ್ಲಿ ನಡೆಯುತ್ತಿರುವ ಗಲಭೆ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಅನಾಚಾರ ಇದನ್ನೆಲ್ಲ ಮರೆಮಾ ಮಾಚಲು ಉಡುಪಿಯ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಬಿಜೆಪಿಯವರು ಸೃಷ್ಟಿಸಿದ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ.
ಬಿಜೆಪಿಯವರಿಗೆ ಹಾಗೂ ಸಂಘ ಪರಿವಾರದವರಿಗೆ ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಂಡು ಹುಚ್ಚರಂತಾಗಿದ್ದಾರೆ ಇದರಿ೦ದಾಗಿ ಸರಕಾರದ ಮೇಲೆ ಇಲ್ಲಸಲ್ಲದ ಆರೋಪವನ್ನು ಹೊರಿಸುತ್ತಿದ್ದಾರೆ೦ದು ಸುರೇಶ್ ಶೆಟ್ಟಿ ಬನ್ನಂಜೆಯವರು ತಿಳಿಸಿದ್ದಾರೆ.

ಅಷ್ಟು ಮಾತ್ರವಲ್ಲ ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆದರೆ ಈ ದೇಶದಲ್ಲಿ ಬಿಜೆಪಿ ಧೂಳಿಪಟವಾಗುವುದು ಖಚಿತ ಎಂಬ ಮಾಹಿತಿ ಇವರಿಗೆ ತಿಳಿದಿದ್ದು ದೇಶ ವಿದೇಶಗಳಲ್ಲಿ ಮಣಿಪುರದಲ್ಲಿ ನಡೆದ ಮಹಿಳೆಯ ಮೇಲೆ ಅತ್ಯಾಚಾರ ಬಡಜನರ ಮೇಲೆ ನಡೆಸುವ ದೌರ್ಜನ್ಯ ಇದನ್ನೆಲ್ಲಾ ಮರೆಮಾಚಬೇಕು ಎಂಬ ದೃಷ್ಟಿಯಿಂದ ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋವನ್ನು ಶೂಟಿಂಗ್ ಮಾಡಿದ್ದಾರೆ ಎಂಬ ಬಗ್ಗೆ ಸುಳ್ಳು ಸುಳ್ಳಾಗಿ ಕಲ್ಪಿಸಿಕೊಂಡು ಈ ಬಿಜೆಪಿ ಹಾಗೂ ಅವರನ್ನು ಬೆಂಬಲಿಸುವ ಎಲ್ಲ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿವೆ.

ಪೋಲಿಸ್ ಇಲಾಖೆ ಇದರ ಬಗ್ಗೆ ತನಿಖೆ ಮಾಡುವ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಈ ಬಗ್ಗೆ ಡಿವೈಎಸ್ಪಿ ಯವರ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು ಎಲ್ಲಾ ಆಯಾಮದಲ್ಲಿ ತನಿಖೆಯನ್ನು ನಡೆಸುತ್ತಿದ್ದಾರೆ ಆದರೆ ಈ ಬಿಜೆಪಿಯವರು ಅನಗತ್ಯವಾಗಿ ಪ್ರತಿಭಟನೆಯನ್ನು ನಡೆಸಿ ನಮ್ಮ ರಾಜ್ಯದ ಹಾಗೂ ನಮ್ಮ ದೇಶದ ಜನಸಾಮಾನ್ಯರ ದಾರಿಯನ್ನು ತಪ್ಪಿಸುತ್ತಿದ್ದಾರೆ ಎಂದು ಉಡುಪಿ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

No Comments

Leave A Comment