ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಹಾಸನ: ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಸಾವು!
ಹಾಸನ: ಹಾಸನದ ಅರಸೀಕೆರೆ ತಾಲೂಕಿನ ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳನಕೊಪ್ಪಲು ಗ್ರಾಮದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಚರಣ್ ಮೃತ ಬಾಲಕನಾಗಿದ್ದಾನೆ. ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಜನರನ್ನು ಡೆಂಗ್ಯೂ ಜ್ವರ ಕಾಡುತ್ತಿದ್ದರೂ ಸೋಂಕು ತಡೆಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬಾಲಕನ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಚರಣ್ ಪೋಷಕರು ಚಿಕ್ಕಮಗಳೂರಿನಲ್ಲಿ ನೆಲೆಸಿದ್ದಾರೆ. ಹಾಸನಕ್ಕೆ ಬಂದು ಚಿಕ್ಕಮಗಳೂರಿಗೆ ಹೋದ ಬಳಿಕ ಚರಣ್ ಗೆ ಜ್ವರ ಬಂದಿತ್ತು. ಹೀಗಾಗಿ ಆತನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೆಚ್ಚುವರಿ ಚಿಕಿತ್ಸೆಗಾಗಿ ಹಾಸನದ ಹಿಮ್ಸ್‌ಗೆ ಪೋಷಕರು ದಾಖಲಿಸಿದ್ದರು. ಅಲ್ಲಿಯೂ ಜ್ವರ ಕಡಿಮೆಯಾಗದಿದ್ದರಿಂದ ಬೆಂಗಳೂರಿಗೆ ಕರೆದೊಯ್ಯುವ ವೇಳೆ ಚರಣ್ ಮೃತಪಟ್ಟಿದ್ದಾನೆ.
ಚರಣ್ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ಹೊರಹಾಕಿರುವ ಗ್ರಾಮಸ್ಥರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮದಲ್ಲಿ ರೋಗ ನಿಯಂತ್ರಣಕ್ಕೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.