Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಮೈಸೂರಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು:ಆ 05 . ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಮಧ್ಯಾಹ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ತಮಿಳುನಾಡಿನ ಮದುಮಲೈ ಅರಣ್ಯ ಒ್ರದೇಶಕ್ಕೆ ತೆರಳಲು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮ ಪುಷ್ಪಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.

ಮುರ್ಮು ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ತಮಿಳುನಾಡಿನ ಮಧು ಮಲೈ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಲಿದ್ದು, ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿಗ ದಂಪತಿ ಬೊಮ್ಮ, ಬೆಳ್ಳಿ ಜೊತೆ ಕಾವಾಡಿಗರು, ಮಾವುತರ ಜೊತೆ ಸಂವಾದ ನಡೆಸಲಿದ್ದಾರೆ.

No Comments

Leave A Comment