ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಕೆಂಪು ಕೋಟೆ, ರಾಜ್‌ಘಾಟ್ ಸುತ್ತಮುತ್ತ ಸೆಕ್ಷನ್ 144 ಜಾರಿಗೊಳಿಸಿದ ಪೊಲೀಸರು

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆಯಂತಹ ಪ್ರದೇಶಗಳ ಬಳಿ ಸಿಆರ್‌ಪಿಸಿ (ಅಪರಾಧ ದಂಡ ಸಂಹಿತೆ) ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ದೃಷ್ಟಿಯಿಂದ, ರಾಜ್‌ಘಾಟ್, ಐಟಿಒ, ಕೆಂಪುಕೋಟೆ ಮುಂತಾದ ಸಮೀಪದ ಪ್ರದೇಶಗಳಲ್ಲಿ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ. ಈ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆಗಳನ್ನು ನಡೆಸುವಂತಿಲ್ಲ ಎಂದು ಪೊಲೀಸರು ಎಕ್ಸ್‌ನಲ್ಲಿ (ಟ್ವಿಟರ್) ಪೋಸ್ಟ್ ಮಾಡಿದ್ದಾರೆ.

ಆಗಸ್ಟ್ 15ರಂದು ದೇಶದಾದ್ಯಂತ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೆಂಪುಕೋಟೆಯಿಂದ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅಪರಾಧ ದಂಡ ಸಂಹಿತೆಯ (ಸಿಆರ್‌ಪಿಸಿ) 144ನೇ ಸೆಕ್ಷನ್‌ 1973ರಲ್ಲಿ ಜಾರಿಗೆ ಬಂತು. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನು ನಿರ್ಬಂಧಿಸುವ ಆದೇಶ ಹೊರಡಿಸಲು ಮ್ಯಾಜಿಸ್ಟ್ರೇಟ್‌ಗೆ ಈ ಸೆಕ್ಷನ್‌ ಅಧಿಕಾರ ನೀಡುತ್ತದೆ. ಇದನ್ನು ಉಲ್ಲಂಘಿಸಿ ಜನರು ಒಂದೆಡೆ ಸೇರಿದರೆ ಅದನ್ನು ‘ಕಾನೂನುಬಾಹಿರ ಸಭೆ’ ಎಂದು ಪರಿಗಣಿಸಬಹುದು. ಅಂತವರ ವಿರುದ್ಧ ಪ್ರಕರಣ ದಾಖಲಿಸಬಹುದು.

No Comments

Leave A Comment