
‘ಮಣಿಪುರ ನಮ್ಮ ಹೃದಯದ ಭಾಗ, ಅಲ್ಲಿ ಶಾಂತಿ ಮರುಸ್ಥಾಪಿಸುವ ಪ್ರಯತ್ನ ಬಿಡುವುದಿಲ್ಲ’: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಭಾರತದ ಈಶಾನ್ಯ ರಾಜ್ಯ ಮಣಿಪುರ “ನಮ್ಮ ಹೃದಯದ ಭಾಗ” ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ, ಈಶಾನ್ಯ ರಾಜ್ಯ ಶೀಘ್ರದಲ್ಲೇ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭೆಯಲ್ಲಿ ನಿನ್ನೆ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಪ್ರತಿಕ್ರಿಯಿಸಿದ ಮೋದಿ, ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಮಣಿಪುರದ ಜನರಿಗೆ ಭರವಸೆ ನೀಡಿದರು. ಮಹಿಳೆಯರ ವಿರುದ್ಧದ ಘೋರ ಅಪರಾಧಗಳಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಕೂಡ ಎಚ್ಚರಿಕೆ ನೀಡಿದರು.
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ದುಃಖಕರವಾಗಿದೆ. ಮಹಿಳೆಯರ ವಿರುದ್ಧದ ಅಪರಾಧಗಳು ಸ್ವೀಕಾರಾರ್ಹವಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದರು.
ಈಶಾನ್ಯವು ನಮ್ಮ ಜಿಗರ್ ಕಾ ತುಕ್ಡಾ (ನಮ್ಮ ಹೃದಯದ ತುಂಡು) ಮಣಿಪುರದ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಆರಂಭವಾದಂತೆ ಮಾತನಾಡುತ್ತಿದ್ದಾರೆ. ನಾವು ಒಟ್ಟಾಗಿ ಈ ಸವಾಲಿಗೆ ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಪ್ರತಿಪಕ್ಷಗಳು ತಮ್ಮ ಭಾಷಣದ ಮಧ್ಯದಲ್ಲಿ ಸಭಾತ್ಯಾಗ ಮಾಡಿದ ನಂತರ ಪ್ರಧಾನಿ ಹೇಳಿದರು.