ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​....ಮುಂದುವರೆದ ನಕ್ಸಲ್​ ಕೂಂಬಿಂಗ್​​: ಶರಣಾಗತಿಗೆ ಸೂಚನೆ, ಪ್ಯಾಕೇಜ್​ ನೀಡುತ್ತೇವೆ ಎಂದ ಪರಮೇಶ್ವರ್​

‘ಮಣಿಪುರ ನಮ್ಮ ಹೃದಯದ ಭಾಗ, ಅಲ್ಲಿ ಶಾಂತಿ ಮರುಸ್ಥಾಪಿಸುವ ಪ್ರಯತ್ನ ಬಿಡುವುದಿಲ್ಲ’: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭಾರತದ ಈಶಾನ್ಯ ರಾಜ್ಯ ಮಣಿಪುರ “ನಮ್ಮ ಹೃದಯದ ಭಾಗ” ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ, ಈಶಾನ್ಯ ರಾಜ್ಯ ಶೀಘ್ರದಲ್ಲೇ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ನಿನ್ನೆ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಪ್ರತಿಕ್ರಿಯಿಸಿದ ಮೋದಿ, ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಮಣಿಪುರದ ಜನರಿಗೆ ಭರವಸೆ ನೀಡಿದರು. ಮಹಿಳೆಯರ ವಿರುದ್ಧದ ಘೋರ ಅಪರಾಧಗಳಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಕೂಡ ಎಚ್ಚರಿಕೆ ನೀಡಿದರು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ದುಃಖಕರವಾಗಿದೆ. ಮಹಿಳೆಯರ ವಿರುದ್ಧದ ಅಪರಾಧಗಳು ಸ್ವೀಕಾರಾರ್ಹವಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದರು.

ಮಣಿಪುರದಲ್ಲಿ ಶೀಘ್ರದಲ್ಲೇ ಶಾಂತಿ ನೆಲೆಸಲಿದೆ ಎಂದು ದೇಶದ ಎಲ್ಲಾ ನಾಗರಿಕರಿಗೆ ನಾನು ಭರವಸೆ ನೀಡಲು ಬಯಸುತ್ತೇನೆ, ಮಣಿಪುರದ ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ, ದೇಶವು ನಿಮ್ಮೊಂದಿಗಿದೆ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ, ಸಂಸತ್ತು ನಿಮ್ಮೊಂದಿಗಿದೆ ಎಂದು ಮೋದಿ ಹೇಳಿದರು.

ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಮಣಿಪುರದ ಪರಿಸ್ಥಿತಿಯ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ್ದರು. ಅಲ್ಲಿ ಶಾಂತಿ ನೆಲೆಸುತ್ತದೆ. ಮಣಿಪುರ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ನಡೆಯುವಂತೆ ನೋಡಿಕೊಳ್ಳುವ ಪ್ರಯತ್ನ ಬಿಡುವುದಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಮತ್ತು ಅದರ ರಾಜಕೀಯ  ಈಶಾನ್ಯದ ಎಲ್ಲಾ ಸಮಸ್ಯೆಗಳಿಗೆ ಮೂಲ ಕಾರಣವಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಕಾಲವನ್ನು ಸ್ಮರಿಸಿದ ಅವರು, ಪ್ರತಿಯೊಂದು ಸಂಸ್ಥೆಗಳು ಉಗ್ರಗಾಮಿ ಸಂಘಟನೆಗಳ ಅಟ್ಟಹಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದ್ದವು. ಸರ್ಕಾರಿ ಕಚೇರಿಗಳಲ್ಲಿ ಮಹಾತ್ಮ ಗಾಂಧಿಯವರ ಭಾವಚಿತ್ರ ಹಾಕುವುದನ್ನು ನಿಷೇಧಿಸಲಾಗಿತ್ತು.  ಮೊಯಿರಾಂಗ್‌ನ ಆಜಾದ್ ಹಿಂದ್ ಫೌಜ್ ಮ್ಯೂಸಿಯಂನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯ ಮೇಲೆ ನಡೆದ ಬಾಂಬ್ ಸ್ಫೋಟದ ಬಗ್ಗೆಯೂ ಮೋದಿ ಪ್ರಸ್ತಾಪಿಸಿದರು.

ಪ್ರಸ್ತುತ ಸರ್ಕಾರದಲ್ಲಿ ಸಚಿವರು ಈಶಾನ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ 400 ರಾತ್ರಿ ತಂಗಿದ್ದಾರೆ ಮತ್ತು ಅವರೇ 50 ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ನಾನು ಈಶಾನ್ಯ ರಾಜ್ಯದೊಂದಿಗೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿದ್ದೇನೆ. ಪ್ರಧಾನಿಯಾಗುವುದಕ್ಕೂ ಮುನ್ನ ನಾನು ಈ ಪ್ರದೇಶದಾದ್ಯಂತ ಪ್ರವಾಸ ಮಾಡಿದ್ದೇನೆ ಎಂದರು.

ಸಾರ್ವತ್ರಿಕ ಚುನಾವಣೆ 2024ಕ್ಕೆ ಇನ್ನು ಕೇವಲ ಎಂಟು ತಿಂಗಳುಗಳು ಬಾಕಿ ಇರುವಾಗ, ಪ್ರತಿಪಕ್ಷಗಳು ಸದನದಿಂದ ಸಭಾತ್ಯಾಗ ಮಾಡಿದ ನಂತರ ಅವಿಶ್ವಾಸ ನಿರ್ಣಯವನ್ನು ಧ್ವನಿ ಮತದಿಂದ ಮೋದಿ ಸರ್ಕಾರ ನಿನ್ನೆ ಸೋಲಿಸಿತು.

No Comments

Leave A Comment