ಲೋಕಸಭೆಯಲ್ಲಿ GST ತಿದ್ದುಪಡಿ ಮಸೂದೆ ಅಂಗೀಕಾರ; ಆನ್‌ಲೈನ್ ಗೇಮಿಂಗ್, ಕುದುರೆ ರೇಸ್ ಮೇಲೆ ಶೇ. 28 ರಷ್ಟು ತೆರಿಗೆ
ನವದೆಹಲಿ: ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ.
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ಸದನದಲ್ಲಿ GST ಮಸೂದೆ ಮಂಡಿಸಿದರು.
ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023, ಮತ್ತು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.