ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂ. ದಂಡ – ಏನಿದು ಪ್ರಕರಣ?
ಹೈದರಾಬಾದ್:ಆ 11: ನಟಿ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅವರಿಗೆ ನ್ಯಾಯಾಲಯವು 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂಪಾಯಿ ದಂಡ ವಿಧಿಸಿದೆ.
ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ.
ಇನ್ನು ಇಎಸ್ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್ನ ಕುರ್ಚಿ, ಪ್ರೊಜೆಕ್ಟರ್ಗಳನ್ನು ಜಪ್ತಿ ಮಾಡಿದ್ದರು.