Log In
BREAKING NEWS >
ಅಗಸ್ಟ್ 10ರಿ೦ದ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ೧೨೪ನೇ ಭಜನಾ ಸಪ್ತಾಹಮೋತ್ಸವವು ಆರ೦ಭಗೊಳ್ಳಲಿದೆ....

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಎಫ್ಐಆರ್ ದಾಖಲು, 3 ಆಯಾಮಗಳಲ್ಲಿ ತನಿಖೆ ನಡೆಸಲು ಡಿಸಿಎಂ ಸೂಚನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟು ಗಾಯವಾದ ಘಟನೆಗೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್​​​ದೂರು ದಾಖಲಿಸಿದ್ದಾರೆ.

ಹಲಸೂರುಗೇಟ್ ಪೊಲೀಸ್​​​​​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ ಎಫ್ಐಆರ್ ದಾಖಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.. ಈ ಘಟನೆ ಸಂಬಂಧ ಮೂರು ಆಯಾಮಗಳಲ್ಲಿ ತನಿಖೆ ನಡೆಸುವಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್(DK Shivakumar) ಸೂಚನೆ ನೀಡಿದ್ದಾರೆ.

ಮಧ್ಯರಾತ್ರಿ ಡಿಸಿಎಂ ಸಭೆ: ಬಿಬಿಎಂಪಿಯಲ್ಲಿ ಅಗ್ನಿ ಅವಘಡ ಘಟ‌‌ನೆ ಬಗ್ಗೆ ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯರಾತ್ರಿ ಸಭೆ ನಡೆಸಿದರು. ಕೆಮಿಕಲ್ ನಿಂದ ಅವಘಡಕ್ಕೆ ಕಾರಣವಾಗಿದ್ದು ಹೇಗೆ ಎಂದು ಪರಿಶೀಲಿಸಲು ಪೊಲೀಸರು ದೂರು ದಾಖಲಿಸುವ ಕುರಿತು ತಡರಾತ್ರಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದರು. ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಸೇರಿದಂತೆ ಕೆಲ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಡಿ ಕೆ ಶಿವಕುಮಾರ್ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬಿಬಿಎಂಪಿ ಕಡತಗಳ ಸಂರಕ್ಷಣೆ ಮುಖ್ಯವಾಗಿದೆ. ಬಿಬಿಎಂಪಿ ಆವರಣದಲ್ಲಿರುವ ಲ್ಯಾಬ್ ಸ್ಥಳಾಂತರದ ಬಗ್ಗೆ ಚರ್ಚೆ ಹಾಗೂ ಮತ್ತೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಗೆ ಡಿಸಿಎಂ ಸೂಚನೆ ನೀಡಿದ್ದಾರೆ.

ಘಟನೆ ಕುರಿತು 3 ಆಯಾಮಗಳಲ್ಲಿ ತನಿಖೆ ನಡೆಸಿ. ಆಂತರಿಕ ತನಿಖೆ ನಡೆಸಲು ಬಿಬಿಎಂಪಿ ತಾಂತ್ರಿಕ ತಂಡಕ್ಕೆ ಸೂಚನೆ ನೀಡಿದರು. ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆಯಿಂದ ಮತ್ತೊಂದು ತನಿಖೆ ಹಾಗೂ ಘಟನೆ ಕುರಿತು ಇಂಧನ ಇಲಾಖೆ ಅಧಿಕಾರಿಗಳಿಂದಲೂ ತನಿಖೆ ನಡೆಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

No Comments

Leave A Comment