Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ದೆಹಲಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ 21 ಪಿಸ್ತೂಲ್‌ಗಳನ್ನು ಹೊಂದಿದ್ದ ವ್ಯಕ್ತಿಯ ಬಂಧನ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ, ದೆಹಲಿ ಪೊಲೀಸರ ವಿಶೇಷ ಘಟಕ, 32 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 21 ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಮಧ್ಯಪ್ರದೇಶದ ಸಾಗರ್ ನಿವಾಸಿ ಲಾಲ್ ಸಿಂಗ್ ಚಾದರ್ ತನ್ನ ತವರು ರಾಜ್ಯದ ಬುರ್ಹಾನ್‌ಪುರದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಖರೀದಿಸಿ, ದೆಹಲಿ-ಎನ್‌ಸಿಆರ್‌ಗೆ ಸರಬರಾಜು ಮಾಡುತ್ತಿದ್ದ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 4 ರಂದು ಚಾದರ್ ತನ್ನ ಸಂಪರ್ಕದಲ್ಲಿರುವ ಒಬ್ಬರಿಗೆ ಶಸ್ತ್ರಾಸ್ತ್ರಗಳನ್ನು ತಲುಪಿಸಲು ರಿಂಗ್ ರೋಡ್‌ನಲ್ಲಿರುವ ಗಾಂಧಿ ಮ್ಯೂಸಿಯಂ ಬಳಿ ತೆರಳುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು ಎಂದು ವಿಶೇಷ ಪೊಲೀಸ್ ಆಯುಕ್ತ (ವಿಶೇಷ ಸೆಲ್) ಎಚ್‌ಜಿಎಸ್ ಧಲಿವಾಲ್ ಅವರು ತಿಳಿಸಿದ್ದಾರೆ.

ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ದಂಧೆ ನಡೆಸುತ್ತಿದ್ದ ಸಾಗರ್‌ನ ರಾಜೇಶ್ ಪಯಾಸಿಯೊಂದಿಗೆ ಸಂಪರ್ಕಕ್ಕೆ ಬಂದ ನಂತರ ಚಾದರ್ ದೆಹಲಿ-ಎನ್‌ಸಿಆರ್‌ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಪೂರೈಸಲು ಪ್ರಾರಂಭಿಸಿದ ಎಂದು ಅಧಿಕಾರಿ ತಿಳಿಸಿದ್ದಾರೆ.

No Comments

Leave A Comment