ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಇನ್‌ಸ್ಟಾಗ್ರಾಂ ಪೋಸ್ಟ್‌ನಿಂದ ಕೋಟಿ ಕೋಟಿ ಸಂಪಾದನೆ: ಸುಳ್ಳು ಸುದ್ದಿ ಎಂದ ಕಿಂಗ್ ಕೊಹ್ಲಿ

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಯಾವಾಗಲೂ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಲ್ಲಿರುತ್ತಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ಗೆ ಅತಿ ಹೆಚ್ಚು ಗಳಿಕೆ ಕಾಣುವವರ ಪೈಕಿ ವಿಶ್ವದಲ್ಲಿ 14ನೇ ಸ್ಥಾನ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಇದೀಗ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ.

ವಿರಾಟ್ ಕೊಹ್ಲಿ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಪ್ರತಿ ಪೋಸ್ಟ್‌‌ಗೆ 11.45 ಕೋಟಿ ರೂ. ಗಳಿಸುತ್ತಾರೆ ಎಂಬ ವರದಿಗಳನ್ನು ಅವರು ಶನಿವಾರ ತಳ್ಳಿಹಾಕಿದ್ದಾರೆ.

‘ಜೀವನದಲ್ಲಿ ನನಗೆ ಸಿಕ್ಕಿರುವ ಎಲ್ಲದಕ್ಕೂ ನಾನು ಕೃತಜ್ಞನಾಗಿದ್ದೇನೆ ಮತ್ತು ಋಣಿಯಾಗಿದ್ದೇನೆ. ನನ್ನ ಸಾಮಾಜಿಕ ಮಾಧ್ಯಮದ ಗಳಿಕೆಯ ಬಗ್ಗೆ ಸುತ್ತುತ್ತಿರುವ ಸುದ್ದಿ ನಿಜವಲ್ಲ’ ಎಂದು ಕೊಹ್ಲಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಕೊಹ್ಲಿ ಬರೋಬ್ಬರಿ 256 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ.

ಹಾಪರ್ ಎಚ್‌ಕ್ಯೂ ಬಿಡುಗಡೆ ಮಾಡಿರುವ 2023ರ ಇನ್‌ಸ್ಟಾಗ್ರಾಮ್‌ ರಿಚ್ ಲಿಸ್ಟ್ ಪ್ರಕಾರ, ಇನ್‌ಸ್ಟಾಗ್ರಾಂ ಪೋಸ್ಟ್​ಗೆ ಪಡೆಯುವ ಸಂಭಾವನೆಯ ವಿಚಾರದಲ್ಲಿ ಕೊಹ್ಲಿ ವಿಶ್ವದ 14ನೇ ಸ್ಥಾನ ಪಡೆದಿದ್ದಾರೆ. ಕೊಹ್ಲಿ ಒಂದು ಇನ್‌ಸ್ಟಾಗ್ರಾಮ್ ಪೋಸ್ಟ್​ಗೆ ಬರೋಬ್ಬರಿ 11.45 ಕೋಟಿ ರೂ. ವಿಧಿಸುತ್ತಾರೆ ಎಂದು ತಿಳಿದುಬಂದಿದೆ.

ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪೋರ್ಚುಗಲ್‌ನ ಸ್ಟಾರ್ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಪಡೆದಿದ್ದಾರೆ. ಅವರು ಒಂದು ಪೋಸ್ಟ್‌ನಿಂದ ಸುಮಾರು 26.75 ಕೋಟಿ ರೂಪಾಯಿ ಗಳಿಸುತ್ತಾರೆ. ಎರಡನೇ ಸ್ಥಾನದಲ್ಲಿ ಅರ್ಜೆಂಟೀನಾದ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಇದ್ದು, ಇವರು ಒಂದು ಪೋಸ್ಟ್‌ನಿಂದ 21.49 ಕೋಟಿ ರೂ. ಸಂಪಾದಿಸುತ್ತಾರೆ.

ಆಗಸ್ಟ್ 30 ರಿಂದ ಏಷ್ಯಾಕಪ್ ಆರಂಭವಾಗಲಿದ್ದು, ಅದಕ್ಕೂ ಮುನ್ನ ಬಿಸಿಸಿಐ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದೆ.

No Comments

Leave A Comment