ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಕೆನಡಾ: ಖಲಿಸ್ತಾನಿ ತೀವ್ರಗಾಮಿಗಳಿಂದ ದೇವಾಲಯ ಧ್ವಂಸ

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ತೀವ್ರಗಾಮಿಗಳ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ ಎಂದು ಆಸ್ಟ್ರೇಲಿಯಾ ಟುಡೇ ವರದಿ ಮಾಡಿದೆ.

ಶನಿವಾರ ತಡರಾತ್ರಿ ಖಾಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಪೋಸ್ಟರ್‌ಗಳೊಂದಿಗೆ ಕೆನಡಾದಲ್ಲಿ ತೀವ್ರಗಾಮಿಗಳ ತಂಡವೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಿವೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

‘ಜೂನ್ 18ರ ಹತ್ಯೆಯಲ್ಲಿ ಭಾರತದ ಪಾತ್ರದ ಕುರಿತು ಕೆನಡಾ ತನಿಖೆ ನಡೆಸುತ್ತಿದೆ’ ಎಂದು ಆಸ್ಟ್ರೇಲಿಯಾ ಟುಡೇ ಹಂಚಿಕೊಂಡಿರುವ ಟ್ವೀಟ್ ನಲ್ಲಿ ಬರೆಯಲಾಗಿದೆ. ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆಸ್ಟ್ರೇಲಿಯಾ ಟುಡೇ ಶೇರ್ ಮಾಡಿರುವ ವಿಡಿಯೋದಲ್ಲಿ ಇಬ್ಬರು ಮುಸುಕುಧಾರಿ ವ್ಯಕ್ತಿಗಳು ಪೋಸ್ಟರ್‌ಗಳನ್ನು ಅಂಟಿಸಿ, ಫೋಟೊ ತೆಗೆಸಿಕೊಂಡು ಪರಾರಿಯಾಗುತ್ತಿರುವುದನ್ನು ತೋರಿಸುತ್ತದೆ. ದೇವಾಲಯದ ದ್ವಾರದ ಮೇಲಿನ ಪೋಸ್ಟರ್‌ನಲ್ಲಿ ಈ ವರ್ಷದ ಜೂನ್‌ನಲ್ಲಿ ಕೊಲ್ಲಲ್ಪಟ್ಟ ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಮತ್ತು ನಿಯೋಜಿತ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಚಿತ್ರವೂ ಇದೆ.

No Comments

Leave A Comment